ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿಗೆ ಮೋದಿ : ಕಾರ್ಯಕ್ರಮಗಳು, ಭದ್ರತೆ

|
Google Oneindia Kannada News

ಬೆಂಗಳೂರು, ಮಾ. 31 : ಮೂರು ದಿನಗಳ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಅಗತ್ಯ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಏ.2ರ ಮಧ್ಯಾಹ್ನ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ನಗರದಲ್ಲಿ ಕೈಗೊಂಡಿರುವ ಭದ್ರತಾ ವ್ಯವಸ್ಥೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಏ.2ರ ಗುರುವಾರದಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದೆ. [ಬಿಜೆಪಿ ಕಾರ್ಯಕಾರಣಿ, ದಕ್ಷಿಣ ಭಾರತದತ್ತ ಗಮನ]

Narendra Modi

ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, 10ಕ್ಕೂ ಹೆಚ್ಚು ಕೇಂದ್ರ ಸಚಿವರು ಸೇರಿದಂತೆ 300ಕ್ಕೂ ಹೆಚ್ಚು ಗಣ್ಯ ವ್ಯಕ್ತಿಗಳು ಆಗಮಿಸಲಿದ್ದಾರೆ.[ಏ.4ರಂದು ಬೆಂಗಳೂರಲ್ಲಿ ಮೋದಿ ಸಮಾವೇಶ]

ಪೊಲೀಸರ ನಿಯೋಜನೆ : ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಕಾರ್ಯಕಾರಣಿ ಸಭೆ ನಡೆಯಲಿದೆ. 1,500 ಹೊರ ರಾಜ್ಯದ ಪೊಲೀಸರು, ಕೈಗಾರಿಕೆ ಭದ್ರತಾ ಪಡೆಯ 500 ಸಿಬ್ಬಂದಿ, ಕ್ಷಿಪ್ರ ಕಾರ್ಯಪಡೆಯ ಎರಡು ತುಕಡಿ, 40 ಕೆಎಸ್‌ಆರ್‌ಪಿ, 30 ಸಿಎಆರ್ ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.

ನರೇಂದ್ರ ಮೋದಿ ಕಾರ್ಯಕ್ರಮಗಳು : ಪ್ರಧಾನಿ ನರೇಂದ್ರ ಮೋದಿ ಅವರು ಏ.2ರ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಪದಾಧಿಕಾರಿಗಳ ಸಭೆ ನಡೆಯಲಿದೆ. ಏ.3ರಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಏ.3ರ ಸಂಜೆ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಮಾವೇಶ ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ. ಏ.4ರಂದು ಕಾರ್ಯಕಾರಿಣಿಯ ಸಮಾರೋಪ ಸಮಾರಂಭ ನಡೆಯಲಿದೆ.

English summary
A massive security blanket will be thrown over Bengaluru from April 2 to 4 on account of Prime Minister Narendra Modi’s visit to the city to attend party National Executive meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X