ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಎಲ್‌ಸಿ ವಿ.ಎಸ್.ಉಗ್ರಪ್ಪ ವಿರುದ್ಧ ಎಫ್‌ಐಆರ್

|
Google Oneindia Kannada News

ಬೆಂಗಳೂರು, ಮಾರ್ಚ್ 19 : ಕಾಂಗ್ರೆಸ್ ಮುಖಂಡ ಮತ್ತು ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೋರ್ಟ್ ಆದೇಶದಂತೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

ವಿ.ಎಸ್.ಉಗ್ರಪ್ಪ ಅವರ ಹೆಸರು ಎರಡು ಕಡೆ ಮತದಾರರ ಪಟ್ಟಿಯಲ್ಲಿತ್ತು. ಈ ಬಗ್ಗೆ ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಕೋರ್ಟ್‌ಗೆ ದೂರು ಕೊಟ್ಟಿದ್ದರು. ದೂರಿನ ವಿಚಾರಣೆ ನಡೆಸಿದ ಬೆಂಗಳೂರಿನ 6ನೇ ಎಸಿಎಂಎಂ ಕೋರ್ಟ್ ಎಫ್‌ಐಆರ್ ದಾಖಲು ಮಾಡಲು ಸೂಚನೆ ನೀಡಿತ್ತು. [ಉಗ್ರಪ್ಪ ಚಡ್ಡಿ ಹಾಕೋಳಕ್ಕೆ ಶುರು ಮಾಡ್ಕೊಂಡಿದ್ದು ಯಾವತ್ತಿಂದ?]

vs ugrappa

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೆಂಕಟಾಪುರ ಗ್ರಾಮ ಮತ್ತು ಬೆಂಗಳೂರು ನಗರದ ಎಚ್‍ಎಸ್‍ಆರ್ ಬಡಾವಣೆಯ 6ನೇ ಹಂತದಲ್ಲಿನ ಮತದಾರರ ಪಟ್ಟಿಯಲ್ಲಿ ವಿ.ಎಸ್.ಉಗ್ರಪ್ಪ ಅವರ ಹೆಸರಿದೆ. ಇದು ವಿಚಾರಣೆ ವೇಳೆಯೂ ಸ್ಪಷ್ಟವಾಗಿದೆ. ಆದ್ದರಿಂದ, ಎಫ್‌ಐಆರ್ ದಾಖಲು ಮಾಡಲು ಕೋರ್ಟ್ ಆದೇಶಿಸಿತ್ತು. [ಭ್ರಷ್ಟ ಪತ್ರಕರ್ತರನ್ನು ಜೈಲಿಗೆ ಕಳಿಸಿ: ಉಗ್ರಪ್ಪ]

ಎಚ್‍ಎಸ್‍ಆರ್ ಲೇಔಟ್ ಪೊಲೀಸರು ಉಗ್ರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆ-1950 1951, 1989 ಯು/ಎಸ್ 31ರ ಅಡಿ ಎಫ್‍ಐಆರ್ ದಾಖಲಿಸಿದ್ದಾರೆ.

English summary
Bengaluru HSR Layout police registered the FIR against Congress MLC V. S. Ugrappa according to the order of the 6th Additional Munsif and Magistrate (ACMM) Court, Bengaluru. V. S. Ugrappa name in the two voters lists BJP leader N. R. Ramesh field complaint to court against Ugrappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X