ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಪಿಎಲ್ ಪಂದ್ಯ : ಮೆಟ್ರೋ, ಬಿಎಂಟಿಸಿ ಸಂಚಾರ ವಿಸ್ತರಣೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 12 : ಮಂಗಳವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 9ನೇ ಆವೃತ್ತಿಯ ಮೊದಲ ಪಂದ್ಯ ನಡೆಯಲಿದೆ. ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯ ವಿಸ್ತರಣೆಯಾಗಿದೆ. ಬಿಎಂಟಿಸಿ ವಿಶೇಷ ಬಸ್ ಸೇವೆ ಒದಗಿಸಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ​ರೈಸರ್ಸ್ ಹೈದರಾಬಾದ್ ತಂಡಗಳು ಮಂಗಳವಾರ ಮುಖಾಮುಖಿಯಾಗಲಿವೆ. ತವರಿನಲ್ಲಿ ಆರ್‌ಸಿಬಿ ಮೊದಲ ಪಂದ್ಯವಾಡುತ್ತಿದ್ದು, ಸಾವಿರಾರು ಅಭಿಮಾನಿಗಳು ಪಂದ್ಯ ವೀಕ್ಷಿಸಲು ಆಗಮಿಸಲಿದ್ದಾರೆ. [ಐಪಿಎಲ್ ನಿಂದ ಹರ್ಷ ಭೋಗ್ಲೆ ಹೊರಹಾಕಲು ಯಾರು ಕಾರಣ?]

mg road

ಸಂಚಾರ ಸಮಯ ವಿಸ್ತರಣೆ : ಐಪಿಎಲ್ ಪಂದ್ಯದ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಸಮಯವನ್ನು ವಿಸ್ತರಣೆ ಮಾಡಿದೆ. ಬೈಯಪ್ಪನಹಳ್ಳಿ ಮತ್ತು ಎಂ.ಜಿ.ರಸ್ತೆ ನಡುವೆ ನಮ್ಮ ಮೆಟ್ರೋ ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 1ರ ತನಕ ಸಂಚಾರ ನಡೆಸಲಿದೆ. ಪ್ರತಿ 30 ನಿಮಿಷಗಳಿಗೆ ಒಂದರಂತೆ ರೈಲುಗಳು ಸಂಚಾರ ನಡೆಸಲಿವೆ.[ಐಪಿಎಲ್ ವೇಳಾಪಟ್ಟಿ]

ಬಿಎಂಟಿಸಿ ಬಸ್ ವ್ಯವಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕ್ರಿಕೆಟ್ ಪಂದ್ಯದ ಹಿನ್ನಲೆಯಲ್ಲಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ. ನಗರದ ಹಲವು ಪ್ರದೇಶಗಳಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ಸುಗಳು ಚಿನ್ನಸ್ವಾಮಿ ಕ್ರೀಡಾಂಗಣ ತಲುಪಲಿವೆ. ಪಂದ್ಯ ಮುಗಿದ ಬಳಿಕ ರಾತ್ರಿ 12 ಗಂಟೆಯ ತನಕ ಸ್ಟೇಡಿಯಂನಿಂದ ವಿವಿಧ ಪ್ರದೇಶಗಳಿಗೆ ಸಂಚಾರ ನಡೆಸಲಿವೆ.

ಎಲ್ಲಿಂದ, ಎಲ್ಲಿಗೆ ಬಸ್ : ಮಾಣೆಕ್ ಷಾ ಪರೇಡ್ ನಿಲ್ದಾಣ-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್‌-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಸರ್ಜಾಪುರ, ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ, ಬ್ರಿಗೇಡ್ ರಸ್ತೆ-ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಚಿನ್ನಸ್ವಾಮಿ ಕ್ರೀಡಾಂಗಣದ ನಿಲ್ದಾಣ-ಕೆಂಗೇರಿ ಕೆಎಚ್‌ಬಿ ಕ್ವಾರ್ಟರ್ಸ್, ಬಿಆರ್‌ವಿ ಪರೇಡ್ ಮೈದಾನ-ಜನಪ್ರಿಯ ಟೌನ್ ಶಿಪ್

ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಯಲಹಂಕ 5ನೇ ಹಂತ, ಬಿಆರ್‌ವಿ ಪರೇಡ್ ಮೈದಾನ-ಆರ್.ಕೆ.ಹೆಗಡೆ ನಗರ, ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣ-ಬಾಗಲೂರು, ಮೆಯೋಹಾಲ್-ಹೊಸಕೋಟೆ ನಡುವೆ ಹೆಚ್ಚುವರಿ ಬಸ್ಸುಗಳು ಸಂಚಾರ ನಡೆಸಲಿವೆ.

ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ನೇರಪ್ರಸಾರ : ಸೋನಿ ಸಿಕ್ಸ್, ಸೆಟ್ ಮ್ಯಾಕ್ಸ್, ಸೋನಿ ಇಎಸ್​ಪಿಎನ್

English summary
Bengaluru : Namma Metro and BMTC buses will ply till half past midnight on April 12th, 2016 for IPL match. Namma Metro Reach 1 Baiyapannahalli-MG Road will ply between 10 pm to 1 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X