ಕೆಎಸ್ಆರ್‌ಟಿಸಿ, ಖಾಸಗಿ ಬಸ್ ಬೆಂಗಳೂರು ಪ್ರವೇಶಿಸುವಂತಿಲ್ಲ

Subscribe to Oneindia Kannada

ಬೆಂಗಳೂರು, ಜನವರಿ 28 : ಬೆಂಗಳೂರು ನಗರದ ಒಳಗೆ ಕೆಎಸ್ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳ ಪ್ರವೇಶವನ್ನು ನಿರ್ಬಂಧಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಫೆ.1 ರಿಂದ 10ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ.

ಅರಮನೆ ಮೈದಾನದಲ್ಲಿ ಫೆಬ್ರವರಿ 3 ರಿಂದ 5ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಸಮಾವೇಶದ ವೇಳೆ ನಗರದಲ್ಲಿ ಸಂಚಾರ ದಟ್ಟಣೆ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಕೆಎಸ್ಆರ್‌ಟಿಸಿ ಮತ್ತು ಖಾಸಗಿ ಬಸ್ಸುಗಳ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. [2016ರ ಫೆಬ್ರವರಿಯಲ್ಲಿ ಜಿಮ್]

ksrtc

ಸಾರಿಗೆ ಇಲಾಖೆ ಆಯುಕ್ತ ರಾಮೇಗೌಡ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬಸ್ಸುಗಳು ರಾತ್ರಿ 11 ಗಂಟೆಯಿಂದ ಮುಂಜಾನೆ 4 ಗಂಟೆಯ ತನಕ ಮಾತ್ರ ನಗರವನ್ನು ಪ್ರವೇಶಿಸಬಹುದಾಗಿದೆ. ಹೊರ ರಾಜ್ಯಗಳಿಂದ ಆಗಮಿಸುವ ಬಸ್ಸುಗಳಿಗೂ ಈ ನಿಯಮ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. [ಕರ್ನಾಟಕದಲ್ಲಿ ಯಾವ ಸಂಸ್ಥೆ ಎಲ್ಲೆಲ್ಲಿ, ಎಷ್ಟು ಹೂಡಿಕೆ?]

ಬಸ್ ಮಾಲೀಕರ ಅಸಮಾಧಾನ : ಬುಧವಾರ ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಸಾರಿಗೆ ಇಲಾಖೆ ಹಾಗೂ ಬೆಂಗಳೂರು ಸಂಚಾರ ವಿಭಾಗದ ಪೊಲೀಸರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ಖಾಸಗಿ ಬಸ್ ಮಾಲೀಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. [ಕೆಎಸ್ಆರ್ ಟಿಸಿ ನೇಮಕಾತಿ, ಅರ್ಜಿ ಸಲ್ಲಿಸಲು ಫೆ.4 ಕೊನೆ ದಿನ]

ಸಾರಿಗೆ ಇಲಾಖೆಯ ಆದೇಶದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಸ್ ಮಾಲೀಕರು, ಪ್ರಾಯೋಗಿಕವಾಗಿ ಇಂತಹ ಆದೇಶ ಜಾರಿಗೆ ತಂದು, ನಗರದೊಳಗೆ ಶಾಶ್ವತವಾಗಿ ಖಾಸಗಿ ಬಸ್ಸುಗಳು ಬರದಂತೆ ಮಾಡುವುದು ಸಾರಿಗೆ ಇಲಾಖೆಯ ಹುನ್ನಾರವಾಗಿದೆ ಎಂದು ದೂರಿದರು.

ಬಸವೇಶ್ವರ ಬಸ್ ನಿಲ್ದಾಣಕ್ಕೆ ಸ್ಥಳಾಂತರ : ಸಾರಿಗೆ ಇಲಾಖೆ ಸರ್ಕಾರಿ ಬಸ್ಸುಗಳು ನಗರಕ್ಕೆ ಪ್ರವೇಶಿಸಬಾರದು ಎಂದು ಆದೇಶ ಹೊರಡಿಸಿರುವುದರಿಂದ, ಮೆಜೆಸ್ಟಿಕ್‌ನಿಂದ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎಂದು ಕೆಎಸ್ಆರ್‌ಟಿಸಿಯ ಅಧಿಕಾರಿಗಳು ಹೇಳಿದ್ದಾರೆ.

English summary
Transport department banned entry of KSRTC and private buses inside the Bengaluru city from February 1 to 10, In the light of Invest Karnataka global business meet 2016 to be held at the palace grounds from February 3 to 5.
Please Wait while comments are loading...