ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಪೊಲೀಸ್ ಆಯುಕ್ತರಾಗಿ ಪ್ರವೀಣ್ ಅಧಿಕಾರ ಸ್ವೀಕಾರ

ಬೆಂಗಳೂರಿಗರಿಗೆ ಹೊಸ ವರ್ಷಕ್ಕೆ ಹೊಸ ಪೊಲೀಸ್ ಆಯುಕ್ತರನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ. ಪ್ರವೀಣ್ ಸೂದ್ ರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

By Mahesh
|
Google Oneindia Kannada News

ಬೆಂಗಳೂರು, ಜನವರಿ 01: ಬೆಂಗಳೂರಿಗರಿಗೆ ಹೊಸ ವರ್ಷಕ್ಕೆ ಹೊಸ ಪೊಲೀಸ್ ಆಯುಕ್ತರನ್ನು ಕರ್ನಾಟಕ ಸರ್ಕಾರ ನೀಡುತ್ತಿದೆ. ಪ್ರವೀಣ್ ಸೂದ್ ರನ್ನು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು ಆಯುಕ್ತರಾಗಿ ಪ್ರವೀಣ್ ಅಧಿಕಾರ ಸ್ವೀಕಾರ ಮುಖ್ಯಸ್ಥ ಭಾನುವಾರ ಬೆಳಗ್ಗೆ ಅಧಿಕಾರ ಸ್ವೀಕರಿಸಿ, ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಮೇಲ್ಮಟ್ಟದಿಂದ ಕೆಳಹಂತದ ವರೆಗೂ ಸಾಕಷ್ಟು ಬದಲಾವಣೆಗಳಾಗಿವೆ. ಹೊಸ ವರ್ಷದಲ್ಲಿ ಹೊಸ ತಂಡದೊಡನೆ ಕಾರ್ಯನಿರ್ವಹಿಸಬೇಕಿದೆ. ನಾಗರಿಕರಿಗೆ ಅನಗತ್ಯ ಕಿರಿಕಿರಿ ನೀಡುವ ಪೊಲೀಸ್ ನಿಯಮಗಳನ್ನು ಬದಲಾಯಿಸಲಾಗುವುದು ಎಂದು ಭರವಸೆ ನೀಡಿದರು.

Praveen Sood new Bengaluru police commissioner

ನಗರ ಪೊಲೀಸ್ ಕಮಿಷನರ್ ಆಗಿದ್ದ ಎಸ್.ಎನ್. ಮೇಘರಿಕ್ ಅವರನ್ನು ಎಸಿಬಿ ಮುಖ್ಯಸ್ಥರನ್ನಾಗಿ ವರ್ಗಾವಣೆ ಮಾಡಲಾಗಿದೆ. ಒಟ್ಟಾರೆ 47 ಐಪಿಎಸ್ ಅಧಿಕಾರಿಗಳನ್ನು ವರ್ಗ ಮಾಡಲಾಗಿದೆ. [ಪೊಲೀಸ್ ಇಲಾಖೆಯಲ್ಲಿ ಭಾರಿ ವರ್ಗಾವಣೆ, ಎಲ್ಲಿಗೆ ಯಾರು?]

ಪ್ರವೀಣ್ ಸೂದ್: 1986ರ ಬ್ಯಾಚಿನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರ ಮೊದಲ ಪೋಸ್ಟಿಂಗ್ ಮೈಸೂರಿನಲ್ಲಿ ಆರಂಭವಾಯಿತು. 1989ರಲ್ಲಿ ಎಸಿಪಿಯಾಗಿ ಕಾರ್ಯನಿರ್ವಹಿಸಿದರು.

2011ರಲ್ಲಿ ರಾಷ್ಟ್ರಪತಿಗಳ ಪೊಲೀಸ್ ಪ್ರಶಸ್ತಿಯನ್ನು ಪಡೆದಿದ್ದಾರೆ. ಐಐಟಿ, ದೆಹಲಿ, Syracuse ವಿವಿ, ನ್ಯೂಯಾರ್ಕ್ ಪದವೀಧರ, ಬಳ್ಳಾರಿ, ರಾಯಚೂರು ಎಸ್ಪಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಕಾರ್ಯರ್ನಿವಹಿಸಿದ್ದಾರೆ. ಮಾರಿಷಸ್ ದೇಶದ ಪೊಲೀಸರಿಗೆ ಸಲಹೆಗಾರರಾಗಿದ್ದರು. ಹೆಚ್ಚಿನ ಮಾಹಿತಿಗೆ ಪ್ರವೀಣ್ ಸೂದ್ ಅವರ ವೆಬ್ ತಾಣವನ್ನು ನೋಡಬಹುದು.

English summary
Karnataka Government has appointed Praveen Sood as the new city police commissioner with the current incumbent, N.S. Megharikh, set to take over as Anti-Corruption Bureau chief. Praveen Sood is a graduate from IIT Delhi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X