ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರವ ಡಾಕ್ಟರೇಟ್ ನಿರಾಕರಿಸಿದ ರಾಹುಲ್ ದ್ರಾವಿಡ್

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್ ಬೆಂಗಳೂರು ವಿಶ್ವವಿದ್ಯಾಲಯದ 2017ನೇ ಸಾಲಿನ ಗೌರವ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ್ದಾರೆ.

By Sachhidananda Acharya
|
Google Oneindia Kannada News

ಬೆಂಗಳೂರು, ಜನವರಿ 25: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್‌ ದ್ರಾವಿಡ್ ಬೆಂಗಳೂರು ವಿಶ್ವವಿದ್ಯಾಲಯದ 2017ನೇ ಸಾಲಿನ ಗೌರವ ಡಾಕ್ಟರೇಟ್‌ ನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಈ ಕುರಿತು ಉಪ ಕುಲಪತಿ ತಿಮ್ಮೇಗೌಡರಿಗೆ ರಾಹುಲ್ ದ್ರಾವಿಡ್ ಈ-ಮೇಲ್ ಮಾಡಿ 'ಪಿಎಚ್ಡಿ ಪದವಿ ಮುಗಿಸಿ ಡಾಕ್ಟರೇಟ್ ಪದವಿ ಪಡೆಯುವುದು ಸೂಕ್ತ ಎನ್ನುವ ಕಾರಣಕ್ಕಾಗಿ ಡಾಕ್ಟರೇಟ್ ನಿರಾಕರಿಸುತ್ತಿದ್ದೇನೆ' ಎಂದು ಹೇಳಿದ್ದಾರೆ. ಮಂಗಳವಾರವಷ್ಟೆ ದ್ರಾವಿಡ್ ಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು. [ರಾಹುಲ್ ದ್ರಾವಿಡ್ ಗೆ ಎರಡನೇ ಬಾರಿಗೆ ಗೌರವ ಡಾಕ್ಟರೇಟ್]

Rahul Dravid rejected honorary doctorate

2014ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯವು ರಾಹುಲ್ ದ್ರಾವಿಡ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆದರೆ ಬೆಂಗಳೂರು ವಿಶ್ವವಿದ್ಯಾಲಯ ನಿಡಿದ ಡಾಕ್ಟರೇಟನ್ನು ದ್ರಾವಿಡ್ ತಿರಸ್ಕರಿಸಿದ್ದಾರೆ. ಒಂದೊಮ್ಮೆ ದ್ರಾವಿಡ್ ಡಾಕ್ಟರೇಟ್ ಪಡೆದಿದ್ದಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವ ಎರಡನೇ ಕ್ರಿಕೆಟರ್ ಎನಿಸಿಕೊಳ್ಳುತ್ತಿದ್ದರು. ಈ ಹಿಂದೆ ಕ್ರಿಕೆಟ್ ದಿಗ್ಗಜ ಗುಂಡಪ್ಪ ವಿಶ್ವನಾಥ್ ಅವರನ್ನು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗಿತ್ತು.

Rahul Dravid rejected honorary doctorate

ದ್ರಾವಿಡ್ :ಇಂದೋರ್ ನಲ್ಲಿ ಜನವರಿ 11ರಂದು ಜನಿಸಿದ ರಾಹುಲ್ ದ್ರಾವಿಡ್ ಅವರು ಬೆಂಗಳೂರಿನ ಸೈಂಟ್ ಜೋಸೆಫ್ ಕಾಲೇಜಿನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. ಅದೇ ಕಾಲೇಜಿನಲ್ಲಿ ಎಂಬಿಎ ಓದುವಾಗ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದರು. ಕ್ರಿಕೆಟ್ ಜಗತ್ತಿನಲ್ಲಿ 'ದಿ ವಾಲ್' ಎಂದು ಹೆಮ್ಮೆಯಿಂದ ಎಲ್ಲರೂ ಗುರುತಿಸುತ್ತಾರೆ.

2012ರಲ್ಲಿ ನಿವೃತ್ತಿ ಹೊಂದಿದ ಬಳಿಕ ಯುವ ಕ್ರಿಕೆಟರ್ ಗಳಿಗೆ ತರಬೇತಿ ನೀಡುತ್ತಿದ್ದಾರೆ. ಸದ್ಯ ಭಾರತ ಎ ತಂಡ ಕೋಚ್ ಆಗಿದ್ದಾರೆ.
ರಾಹುಲ್ ದ್ರಾವಿಡ್ ಅವರ ತಾಯಿ ಪುಷ್ಪಾ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

English summary
Former India captain and current A team coach Rahul Dravid rejected honorary doctorate conferred by Bangalore University ahead of its 52nd annual convocation on January 27
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X