ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.25ರ ತನಕ ಬೆಂಗಳೂರಲ್ಲಿ ನಿಷೇಧಾಜ್ಞೆ ಮುಂದುವರಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ಸೋಮವಾರ ಬೆಂಗಳೂರಿನಲ್ಲಿ ನಡೆದ ಗಲಭೆಯ ನಂತರ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಸೆಕ್ಷನ್ 144 ಅನ್ವಯ ಜಾರಿಯಲ್ಲಿದ್ದ ನಿಷೇಧಾಜ್ಞೆಯನ್ನು ಸೆ.25ರ ವರೆಗೆ ವಿಸ್ತರಣೆ ಮಾಡಲಾಗಿದೆ. ಆದರೆ, 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರಿಯಲ್ಲಿದ್ದ ಕರ್ಫ್ಯೂ ತೆರವುಗೊಳಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಬುಧವಾರ ಸಂಜೆ ಈ ಕುರಿತು ಆದೇಶ ಹೊರಡಿಸಿದ್ದಾರೆ. ನಗರದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಕರ್ಫ್ಯೂವನ್ನು ತೆರವುಗೊಳಿಸಲಾಗಿದೆ. ಆದರೆ, ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಮಾತ್ರ ಜಾರಿಯಲ್ಲಿರುತ್ತದೆ.[ಬೆಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ]

bengaluru police

ಕಾವೇರಿ ನದಿ ನೀರು ಹಂಚಿಕೆ ತೀರ್ಪನ್ನು ಖಂಡಿಸಿ ಬೆಂಗಳೂರಿನಲ್ಲಿ ಗಲಭೆ ನಡೆದಿತ್ತು. ತಮಿಳುನಾಡು ಮೂಲದ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಸೋಮವಾರ ನಡೆದ ಗಲಭೆಗೆ ಸಂಬಂಧಿಸಿದಂತೆ 312 ಜನರನ್ನು ಬಂಧಿಸಲಾಗಿದೆ.[ಚಿತ್ರಗಳು : ಹಿಂಸಾಚಾರಕ್ಕೆ ತಿರುಗಿದ ಕಾವೇರಿ ಪ್ರತಿಭಟನೆ]

ಎಲ್ಲಿ ಕರ್ಫ್ಯೂ ಜಾರಿಯಲ್ಲಿತ್ತು? : ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗಡಿ ರೋಡ್, ರಾಜಾಜಿನಗರ, ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾಲೇಔಟ್, ಯಶವಂತಪುರ, ಮಹಾಲಕ್ಷೀ ಲೇಔಟ್, ಪೀಣ್ಯ, ಆರ್ ಎಂಸಿ ಯಾರ್ಡ್. ನಂದಿನಿ ಲೇಔಟ್, ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಯಲ್ಲಿತ್ತು.

English summary
Cauvery protest turned into violent in Bengaluru on September 12, 2016. Prohibitory orders were imposed under Section 144 Crpc. The prohibitory order in force have been extended till September 25, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X