ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಗಣಿತ ಪತ್ರಿಕೆ ಸೋರಿಕೆಯಾಗಿಲ್ಲ

|
Google Oneindia Kannada News

ಬೆಂಗಳೂರು, ಏಪ್ರಿಲ್ 04 : 'ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ವಿದ್ಯಾರ್ಥಿಗಳು ಆತಂಕಪಡದೆ ಏ.4ರ ಸೋಮವಾರ ಪರೀಕ್ಷೆ ಬರೆಯಬಹುದು' ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಅಜಯ್ ಹಿಲೋರಿ ಸ್ಪಷ್ಟಪಡಿಸಿದರು.

ಭಾನುವಾರ ರಾತ್ರಿಯಿಂದ ಇಂದು ನಡೆಯಬೇಕಾಗಿರುವ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಗಳನ್ನು ಪೊಲೀಸರು ತಳ್ಳಿ ಹಾಕಿದ್ದು, ಎಂದಿನಂತೆ ಪರೀಕ್ಷೆ ನಡೆಯಲಿದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಹೇಳಿದ್ದಾರೆ. [SSLC ಪರೀಕ್ಷೆ ವೇಳಾಪಟ್ಟಿ]

sslc

ಬೆಂಗಳೂರಿನಲ್ಲಿ 20 ಸಾವಿರ ರೂ.ಗಳಿಗೆ ಗಣಿತ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ರಾತ್ರಿ ಸುಂಕದಕಟ್ಟೆ ಬಳಿ ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆ ನಡೆಸಿದಾಗ ಇದು ನಕಲಿ ಪತ್ರಿಕೆ ಎಂದು ತಿಳಿದುಬಂದಿದೆ. [ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನಾದ್ರೂ ಸರಿಯಾಗಿ ನಡೆಸಿ ಶಿಕ್ಷಣ ಸಚಿವರೇ!]

ನಕಲಿ ಪತ್ರಿಕೆ : ಭಾನುವಾರ ರಾತ್ರಿ 11.50ರ ಸುಮಾರಿಗೆ ಸುಂಕದಕಟ್ಟೆ ಸಮೀಪ ಗಣಿತ ಪ್ರಶ್ನೆ ಪತ್ರಿಕೆಯನ್ನು 20 ಸಾವಿರ ರೂ.ಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರ ಬಳಿ ಇದ್ದ ಪ್ರಶ್ನೆ ಪತ್ರಿಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. [ತಿರುಪತಿ: ತಾಯಿ ಶವ ಮನೆಯಲ್ಲಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಹುಡುಗಿ]

ಬೆಂಗಳೂರಿನ ಪೀಣ್ಯ ನಿವಾಸಿಗಳಾದ ದೀಪಕ್ ಮತ್ತು ವಿನೋದ್ ಆರೋಪಿಗಳಾಗಿದ್ದು, ಅವರನ್ನು ವಿಚಾರಣೆ ನಡೆಸಿದಾಗ ಅವರ ಬಳಿ ಇರುವುದು ನಕಲಿ ಪತ್ರಿಕೆ. ಇಂದು ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೂ ಆರೋಪಿಗಳ ಬಳಿ ಇದ್ದ ಪತ್ರಿಕೆಗೂ ಯಾವುದೇ ಹೋಲಿಕೆ ಕಂಡುಬಂದಿಲ್ಲ. ಆದ್ದರಿಂದ, ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

'ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವಿಚಾರವೇ ಸುಳ್ಳು. ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಆತಂಕಪಡೆದೇ ಪರೀಕ್ಷೆ ಬರೆಯಬಹುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಮಾಧ್ಯಮಗಳಿಗೆ ತಿಳಿಸಿದರು.

ಪಿಯುಸಿ ಪತ್ರಿಕೆ 2 ಬಾರಿ ಸೋರಿಕೆ : ಈಗಾಗಲೇ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ 2 ಬಾರಿ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಏ.12ರಂದು ಮರು ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಲಾಗಿದೆ. [ದ್ವೇಷಕ್ಕಾಗಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ?]

ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಮಾರ್ಚ್ 31ರಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ, ಅಂದು ಬೆಳಗ್ಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದು ಮಾಡಲಾಗಿತ್ತು.

English summary
Ajay Hilori Deputy Commissioner of Police (DCP) West Division, Bengaluru city has dismissed the reports that the Mathematics question paper of SSLC exams 2016 was leaked. Mathematics exam scheduled on Monday, April 4.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X