ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿನಿ ಮೇಲೆ ಹಲ್ಲೆ : 9 ಮಂದಿ ಬಂಧನ, ಮೂವರ ಅಮಾನತು

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಫೆಬ್ರವರಿ 05 : ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಪೇದೆಗಳು ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರು ಶುಕ್ರವಾರ ಇಬ್ಬರು ಪೊಲೀಸ್ ಪೇದೆ ಮತ್ತು ಒಬ್ಬರು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. [ತಾಂಜೇನಿಯಾ ವಿದ್ಯಾರ್ಥಿಗಳಿಗೆ ಆತಂಕ ಮೂಡಿಸಿದ ಸಂದೇಶ]

ns megarik

ಸೋಲದೇವನಹಳ್ಳಿ ಪೊಲೀಸರಿಗೆ ದೂರು ನೀಡಿದ್ದ ತಾಂಜೇನಿಯಾ ಮೂಲದ ವಿದ್ಯಾರ್ಥಿನಿ 15ಕ್ಕೂ ಅಧಿಕ ಜನರು ನನ್ನ ಮೇಲೆ ಹಲ್ಲೆ ಮಾಡಿದರು. ಘಟನೆ ನಡೆದ ಸ್ಥಳದಲ್ಲಿ ಪೊಲೀಸರಿದ್ದರೂ ಅವರು ನನ್ನ ನೆರವಿಗೆ ಬರಲಿಲ್ಲ ಎಂದು ಹೇಳಿದ್ದಳು. ಆದ್ದರಿಂದ ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಮೂವರನ್ನು ಅಮಾತನುಗೊಳಿಸಲಾಗಿದೆ. [ಯುವತಿ ಮೇಲೆ ಹಲ್ಲೆ : ಸಿದ್ದರಾಮಯ್ಯಗೆ ಸುಷ್ಮಾ ಸ್ವರಾಜ್ ಕರೆ]

ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ 5 ಆರೋಪಿಗಳನ್ನು ಬಂಧಿಸಲಾಗಿತ್ತು. ಹಲ್ಲೆ ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಸಿಸಿಬಿ ಪೊಲೀಸರು, ಬಂಧಿತರು ನೀಡಿದ ಮಾಹಿತಿ ಆಧಾರದ ಮೇಲೆ ಶುಕ್ರವಾರ 4 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ 6 ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ತಾಂಜೇನಿಯಾ ರಾಯಭಾರಿ ಕಚೇರಿಯ ಅಧಿಕಾರಿಗಳ ತಂಡ ಸಂಜೆ 4.30ರ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದು, 5.15ಕ್ಕೆ ಕುಮಾರಕೃಪಾ ಅತಿಥಿಗೃಹದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಲಿದ್ದಾರೆ.

ಜನವರಿ 31ರ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಾಂಜೇನಿಯಾ ಮೂಲದ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಭಾರೀ ವಿವಾದ ಹುಟ್ಟು ಹಾಕಿದ್ದು, ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದೆ.

English summary
The Bengaluru police have arrested in total of 9 persons and is looking for 6 more persons in connection with the attack on a Tanzanian student. In addition to this two constables and a sub-inspector of police have been suspended.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X