ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಎಸ್ ತಿವಾರಿ ಸಾವು: ಪೊಲೀಸ್ ಅಧಿಕಾರಿಗಳ ಜತೆ ಪರಂ ಚರ್ಚೆ

ಉತ್ತರ ಪ್ರದೇಶದಲ್ಲಿ ಮೇ 17ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಶವವಾಗಿ ಪತ್ತೆಯಾಗಿದ್ದರು. ಇದರ ಜಾಡು ಹಿಡಿದು ಹೊರಟಿರುವ ಆ ರಾಜ್ಯದ ಎಸ್ಐಟಿ ತಂಡ ಶುಕ್ರವಾರ ಬೆಂಗಳೂರಿಗೆ ಬರಲಿದೆ.

|
Google Oneindia Kannada News

ಬೆಂಗಳೂರು, ಮೇ 19: ಉತ್ತರ ಪ್ರದೇಶದಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವನ್ನಪ್ಪಿದ ಪ್ರಕರಣದ ತನಿಖೆಗಾಗಿ ಉತ್ತರ ಪ್ರದೇಶದ ವಿಶೇಷ ತನಿಖಾ ದಳ (ಎಸ್ಐಟಿ) ರಾಜ್ಯಕ್ಕೆ ಶುಕ್ರವಾರ (ಮೇ 19) ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ ಅವರು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.[ಆಯುಕ್ತ ಅನುರಾಗ್ ತಿವಾರಿ ಸಾವು; ಏನು ಹೇಳ್ತಾರೆ ಪೊಲೀಸರು?]

ಉತ್ತರ ಪ್ರದೇಶದ ಹಜರತ್ ಗಂಜ್ ನಲ್ಲಿರುವ ಅತಿಥಿ ಗೃಹದ ಬಳಿ ಅನುರಾಗ್ ತಿವಾರಿ ಮೇ 17ರಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದರು.[ತಿವಾರಿ ಸಾವಿನ ಕೇಸ್, ಶೋಭಾ ಮನವಿ ಪುರಸ್ಕರಿಸಿದ ಸಿಎಂ ಯೋಗಿ]

Tiwari death Case: Parameshwar meets Senior Police Officials

ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಶವವಾಗಿ ಪತ್ತೆಯಾಗಿದ್ದರು. ಮೊದಲಿಗೆ ಇದನ್ನು ಹೃದಯಾಘಾತದಿಂದಾದ ಸಾವು ಎಂದು ಅಂದಾಜಿಸಲಾಗಿತ್ತು. ಆದರೆ, ತಿವಾರಿ ಕುಟುಂಬದ ಸದಸ್ಯರು ಇದು ಕೊಲೆಯೆಂಬ ಅನುಮಾನ ವ್ಯಕ್ತಪಡಿಸಿರುವುದರಿಂದ ಹಾಗೂ ಈ ಪ್ರಕರಣ ರಾಜಕೀಯ ತಿರುವು ಪಡೆದಿರುವುದರಿಂದ ಎಸ್ಐಟಿ ಅಧಿಕಾರಿಗಳು ಭೇಟಿ ನೀಡುತ್ತಿರುವುದು ಮಹತ್ವ ಪಡೆದುಕೊಂಡಿದೆ.

{promotion-urls}

English summary
As Uttar Pradesh SIT is comming to Bengaluru as a part of their investigation of IAS officer Anurag Tiwari's mysterious death case, state home minister G. Parameshwar meets senior police officials in Bengaluru and gained the information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X