ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಶೌಚಾಲಯದಲ್ಲಿ ಸುಸು ಉಚಿತ

|
Google Oneindia Kannada News

ಬೆಂಗಳೂರು, ಜುಲೈ 22 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳಲ್ಲಿ ಇನ್ನು ಮುಂದೆ ಉಚಿತವಾಗಿ ಮೂತ್ರ ವಿಸರ್ಜನೆ ಮಾಡಬಹುದಾಗದೆ. ಮೂತ್ರ ವಿಸರ್ಜನೆಗೆ ಹಣ ಪಡೆಯಬಾರದು ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಕೆಲವು ಸಾರ್ವಜನಿಕ ಶೌಚಾಲಯಗಳಲ್ಲಿ ಮೂತ್ರ ವಿಸರ್ಜನೆ ಮಾಡಲು 1 ರೂ. ಹಣ ಪಾವತಿ ಮಾಡಬೇಕಿತ್ತು. ಮೂತ್ರ ವಿಸರ್ಜನೆ ಉಚಿತ ಎಂಬ ಫಲಕವಿದ್ದರೂ ಹಣವನ್ನು ವಸೂಲಿ ಮಾಡಲಾಗುತ್ತಿತ್ತು. ಆದ್ದರಿಂದ ಪಾಲಿಕೆ ಆಯುಕ್ತ ಜಿ.ಕುಮಾರ್ ನಾಯಕ್ ಹಣ ವಸೂಲಿ ಮಾಡದಂತೆ ಸುತ್ತೋಲೆ ಹೊರಡಿಸಿದ್ದಾರೆ. [ಶೌಚಾಲಯ ನಿರ್ಮಿಸಿ, ಹೆಣ್ಣು ಮಕ್ಕಳನ್ನು ಉಳಿಸಿ!]

toilet

ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಮಾಡಲು ಹಣ ಪಾವತಿ ಮಾಡಬೇಕು ಎಂಬ ಕಾರಣಕ್ಕೆ ಜನರು ಶೌಚಾಲಯಕ್ಕೆ ಆಗಮಿಸುತ್ತಿರಲಿಲ್ಲ. ಶೌಚಾಲಯದಲ್ಲಿಯೂ ಜನರಿಗೆ ಚಿಲ್ಲರೆ ನೀಡುವುದು ಸಮಸ್ಯೆ ಆಗಿತ್ತು. ಆದ್ದರಿಂದ ಮೂತ್ರ ವಿಸರ್ಜನೆಗೆ ಹಣ ಪಡೆಯದಿರಲು ನಿರ್ಧಾರ ಕೈಗೊಳ್ಳಲಾಗಿದೆ. [ಪಬ್ಲಿಕ್ ಟಾಯ್ಲೆಟ್ ನಿರ್ಮಾಣದಲ್ಲಿ ಕರ್ನಾಟಕ ನಂ.5]

ಸುತ್ತೋಲೆ ಏನು : ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಶೌಚಾಲಯಗಳಲ್ಲಿ ಗುತ್ತಿಗೆದಾರರು ಹಣ ವಸೂಲಿ ಮಾಡಬಾರದು. ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಉಚಿತ ಎಂಬ ಫಲಕವನ್ನು ಕಡ್ಡಾಯವಾಗಿ ಹಾಕಬೇಕು ಎಂದು ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. [ಇಲ್ಲಿ 'ಕತ್ತೆ'ಗಳು ಮಾತ್ರ ಉಚ್ಚೆ ಹೊಯ್ಯುತ್ತವೆ, ಛೀ!]

ಮುಂದಿನ ದಿನಗಳಲ್ಲಿ ಪಾಲಿಕೆ ನಿರ್ಮಿಸಿದ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯ ಟೆಂಡರ್ ನೀಡುವಾಗಲೂ ಮೂತ್ರ ವಿಸರ್ಜನಗೆ ಹಣ ಪಡೆಯಬಾರದು ಎಂಬ ಷರತ್ತನ್ನು ಹಾಕಲು ನಿರ್ಧರಿಸಲಾಗಿದೆ. ಇದು ಜಾರಿಗೆ ಬರುವುದೇ ಎಂದು ಕಾದು ನೋಡಬೇಕು.

English summary
Urinals free in the Bruhat Bengaluru Mahanagara Palike (BBMP) public urinals across the city. The circular was issued by BBMP Commissioner G.Kumar Naik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X