ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ'

|
Google Oneindia Kannada News

ಬೆಂಗಳೂರು, ಜು.03 : ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ತಮ್ಮ ವಿರುದ್ಧ ದುರುದ್ದೇಶಪೂರ್ವಕವಾಗಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡುತ್ತಿದ್ದಾರೆ. ಮೂರು ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ಬಿ.ಎಸ್.ಯಡಿಯೂರಪ್ಪ ಅವರು ಕಳೆದ ವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. [ಯಡಿಯೂರಪ್ಪ ವಿರುದ್ಧ 13ನೇ ಎಫ್ ಐಆರ್]

yeddyurappa

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಎನ್.ವೇಣುಗೋಪಾಲಗೌಡ ಅವರ ಪೀಠದ ಮುಂದೆ ಹೇಳಿಕೆ ನೀಡಿರುವ ಲೋಕಾಯುಕ್ತ ಪರ ವಕೀಲ ವೆಂಕಟೇಶ ಪಿ.ದೇಸಾಯಿ ಅವರು ಈ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ತಕ್ಷಣಕ್ಕೆ ಬಂಧಿಸುವುದಿಲ್ಲ ಎಂದು ಮಾಹಿತಿ ನೀಡಿದರು. [ಯಡಿಯೂರಪ್ಪ ಅವರ ಮುಂದಿನ ನಡೆಯೇನು?]

ಲೋಕಾಯುಕ್ತ ಪರ ವಕೀಲರ ಹೇಳಿಕೆಯನ್ನು ಪಡೆದುಕೊಂಡ ನ್ಯಾಯಮೂರ್ತಿಗಳು ಅರ್ಜಿಯ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದರು. ಇದೇ ವೇಳೆ ಯಡಿಯೂರಪ್ಪ ವಿರುದ್ಧದ ತನಿಖೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿದೆ. [ಯಡಿಯೂರಪ್ಪಗೆ ಧೈರ್ಯ ತುಂಬಿದ ಎಚ್ಡಿಕೆ]

ವಡೇರಹಳ್ಳಿ, ಬಿಳೇಕಹಳ್ಳಿ ಮತ್ತು ಜೆ.ಬಿ.ಕಾವಲ್‌ನಲ್ಲಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿ ಮಾಡಿದ್ದಾರೆ. ಇದನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

English summary
Karnataka : Lokayukta police on Thursday informed the High Court that they will not arrest Former CM B.S.Yeddyurappa in connection with three illegal de-notification case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X