Get Updates
Get notified of breaking news, exclusive insights, and must-see stories!

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆ?

ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಏಪ್ರಿಲ್ 4: ಬಿಸಿಲ ಬೇಗೆ ತಡಯಲಾರದೆ ಉಸ್ಸಪ್ಪಾ... ಎನ್ನುತ್ತಿರುವವರಿಗೆಲ್ಲ ಇಲ್ಲೊಂದು ಸಿಹಿ ಸುದ್ದಿ ಇದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ 38 ಡಿಗ್ರಿ ಸೆಲ್ಷಿಯಸ್ ದಾಟಿದ್ದು, ಹಲವು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಒಂದೇ ಒಂದು ಬಾರಿ ಮಳೆಯಾದರೆ ಸಾಕಪ್ಪ ಎಂದುಕೊಳ್ಳುತ್ತಿರುವವರಿಗೆಲ್ಲ ವರುಣದೇವ ಅಂತೂ ಕೃಪೆ ನೀಡುತ್ತಿದ್ದಾನೆ.[ಹಾಸನದಲ್ಲಿ ಧಾರಾಕಾರ ಮಳೆ: ಸಿಡಿಲಿಗೆ ಇಬ್ಬರು ಬಲಿ]

Will State get summer shower soon?

ಒಡಿಶಾದಿಂದ ಕೇರಳದವರೆಗೆ ಕಾಣಿಸಿಕೊಂಡ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದಲ್ಲೂ ಹಲವೆಡೆ ಮಳೆ ಕಾಣಿಸಿಕೊಳ್ಳಲಿದ್ದು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಆದರೆ ಬೆಂಗಳೂರು ನಗರಕ್ಕೂ ವರುಣನ ಸಿಂಚನವಾಗುವ ಸಂಭವ ಕಡಿಮೆ ಎನ್ನುತ್ತಿದೆ ಹವಾಮಾನ ಇಲಾಖೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+