ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಅಧಿವೇಶನ, ಮೊದಲ ದಿನ ಪ್ರತಿಭಟನೆಯ ಬಿಸಿ

|
Google Oneindia Kannada News

ಬೆಳಗಾವಿ, ಜೂ. 29 : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಯಲಿದೆ. ಸೋಮವಾರದಿಂದ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಇಂದು ಸಾಲು-ಸಾಲು ಪ್ರತಿಭಟನೆಗಳಿಗೆ ಬೆಳಗಾವಿ ಸಾಕ್ಷಿಯಾಗಲಿದೆ.

ಬೆಳಗಾವಿಯಲ್ಲಿ ನಡೆಯುತ್ತಿರುವ 6ನೇ ವಿಧಾನಮಂಡಲ ಅಧಿವೇಶನವಿದಾಗಿದ್ದು, ಈ ಬಾರಿಯೂ ಕಬ್ಬು ಬೆಳೆಗಾರರ ಸಮಸ್ಯೆ ಚರ್ಚೆಯ ಕೇಂದ್ರಬಿಂದುವಾಗಲಿದೆ. ಕಬ್ಬು ಬೆಳೆಗಾರರು ಈ ಬಾರಿಯೂ ಸುವರ್ಣಸೌಧದ ಮುಂದೆ ನಿರಂತರ ಪ್ರತಿಭಟನೆ ನಡೆಸುವ ಘೋಷಣೆ ಮಾಡಿದ್ದಾರೆ. [ಹೋರಾಟಕ್ಕೆ ಸಜ್ಜಾದ ಕಬ್ಬು ಬೆಳೆಗಾರರು]

protest

ಸೋಮವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪಗಳು ಆರಂಭವಾಗಲಿವೆ. ಕಬ್ಬು ಬೆಳಗಾರರ ಬಾಕಿ ಪಾವತಿ, ರಾಜ್ಯದಲ್ಲಿನ ರೈತರ ಸರಣಿ ಆತ್ಮಹತ್ಯೆ ವಿಚಾರಗಳ ಬಗ್ಗೆ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಟಾಪಟಿ ನಡೆಯುವ ಸಾಧ್ಯತೆ ಇದೆ. [ದಯವಿಟ್ಟು ಆತ್ಮಹತ್ಯೆಗೆ ಶರಣಾಗಬೇಡಿ : ರೈತರಿಗೆ ಸಿದ್ದು ಮನವಿ]

ಪ್ರತಿಪಕ್ಷ ಬಿಜೆಪಿ ಕೊಪ್ಪಳ ಜಿಲ್ಲೆಯಲ್ಲಿ ನಡೆದ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಅವರ ರಾಜೀನಾಮೆಗೆ ಒತ್ತಾಯಿಸಲಿದೆ. ಹತ್ತು ದಿನಗಳ ಕಾಲದ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ, ಜೆಡಿಎಸ್ ಸಜ್ಜಾಗಿದೆ. ['ಭಾಗ್ಯ' ಘೋಷಣೆ ಸಾಲದು, ಅನುಷ್ಠಾನಕ್ಕೆ ತನ್ನಿ: ಕಾಗೋಡು]

ಇಂದಿನ ಪ್ರತಿಭಟನೆಗಳು

* ಬೆಳಗ್ಗೆ 9.30ಕ್ಕೆ ಎರಡು ವರ್ಷಗಳಿಂದ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಪಾವತಿ ಮಾಡುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

* ಬೆಳಗ್ಗೆ 10.30ಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಿದ್ದಾರೆ.

* ಬೆಳಗ್ಗೆ 11 ಗಂಟೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಧಾರವಾಡದಿಂದ ನಡೆಸಿದ ಪಾದಯಾತ್ರೆ ಸಿ.ಪಿ.ಹೆಡ್ ಮೈದಾನದಲ್ಲಿ ಅಂತ್ಯಗೊಳ್ಳಲಿದ್ದು, ಬೃಹತ್ ಸಮಾವೇಶ ನಡೆಯಲಿದೆ.

English summary
The Karnataka assembly monsoon session beginning in Belagavi from Monday, June 29. Various organization plans for protest in front of Suvarna vidhana soudha Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X