{ "@context": "https://schema.org", "@type": "NewsArticle", "mainEntityOfPage":{ "@type":"WebPage", "@id":"https://kannada.oneindia.com/news/belagavi/legislative-council-accepts-seven-bills-090166.html" }, "headline": "ವಿಧಾನ ಪರಿಷತ್‌ನಲ್ಲಿ ಏಳು ವಿಧೇಯಕಗಳಿಗೆ ಅಂಗೀಕಾರ", "url":"https://kannada.oneindia.com/news/belagavi/legislative-council-accepts-seven-bills-090166.html", "image": { "@type": "ImageObject", "url": "http://kannada.oneindia.com/img/1200x60x675/2014/12/19-1419001839-cm.jpg", "width": "1200", "height":"675" }, "thumbnailUrl":"http://kannada.oneindia.com/img/128x50/2014/12/19-1419001839-cm.jpg", "datePublished": "2014-12-19 20:40:56", "dateModified": "2014-12-19T20:40:56+05:30", "author": { "@type": "Person", "name": "Kiran B Hegde" }, "publisher": { "@type": "Organization", "name": "Oneindia Kannada", "url":"https://kannada.oneindia.com", "sameAs" : [ "https://www.facebook.com/oneindiakannada","https://twitter.com/oneindiakannada"], "logo": { "@type": "ImageObject", "url": "https://kannada.oneindia.com/images/amp-oneindia-logo.png", "width": "189", "height": "60" } }, "articleSection":"Belgaum", "description": "Seven bills accepted in Legislative Council on Friday which were already accepted by Legislative Assembly.", "keywords": "Legislative council, belagavi, dh shankaramurthy, siddaramayya, tb jayachandra, ramalingareddy, kimmane ratnakar, voice vote, ವಿಧಾನ ಪರಿಷತ್‌ನಲ್ಲಿ ಏಳು ವಿಧೇಯಕಗಳಿಗೆ ಅಂಗೀಕಾರ, ವಿಧಾನ ಪರಿಷತ್, ಬೆಳಗಾವಿ, ಡಿಎಚ್ ಶಂಕರಮೂರ್ತಿ, ಸಿದ್ದರಾಮಯ್ಯ, ಟಿಬಿ ಜಯಚಂದ್ರ, ರಾಮಲಿಂಗಾರೆಡ್ಡಿ, ಕಿಮ್ಮನೆ ರತ್ನಾಕರ, ಧ್ವನಿಮತ", "articleBody":"ಬೆಳಗಾವಿ, ಡಿ. 19: ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ ಏಳು ವಿಧೇಯಕಗಳನ್ನು ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಧ್ವನಿಮತಕ್ಕೆ ಹಾಕುವ ಮೂಲಕ ಅಂಗೀಕರಿಸಲಾಯಿತು. ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಧ್ವನಿಮತಕ್ಕೆ ಹಾಕುವ ಮೂಲಕ ವಿಧೇಯಕ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.೨೦೧೪ ರ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಷತ್& zwnj ನಲ್ಲಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ತಿದ್ದುಪಡಿ ವಿಧೇಯಕ, ೨೦೧೪ ನೇ ಸಾಲಿನ ಭಾರತ ಉತ್ತರಾಧಿಕಾರ ಕರ್ನಾಟಕ ತಿದ್ದುಪಡಿ ವಿಧೇಯಕ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ತಿದ್ದುಪಡಿ ವಿಧೇಯಕವನ್ನು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅಂಗೀಕಾರಕ್ಕಾಗಿ ಮಂಡಿಸಿದರು. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ವೈ ಫೈ೨೦೧೩ ನೇ ಸಾಲಿನ ಕರ್ನಾಟಕ ಅತ್ಯವಶ್ಯಕ ಸೇವೆಗಳ ನಿರ್ವಹಣೆ ವಿಧೇಯಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಶಿಕ್ಷಣ ತಿದ್ದುಪಡಿ ವಿಧೇಯಕವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ಪುರಸಭೆಗಳು ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಪೌರಾಡಳಿತ ಸಚಿವರ ಬದಲಿಗೆ ಕಾನೂನು ಸಚಿವರು ಪರಿಷತ್& zwnj ನ ಅಂಗೀಕಾರಕ್ಕಾಗಿ ಮಂಡಿಸಿದರು. ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧ : ಸಿಎಂ" }
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನ ಪರಿಷತ್‌ನಲ್ಲಿ ಏಳು ವಿಧೇಯಕಗಳಿಗೆ ಅಂಗೀಕಾರ

By Kiran B Hegde
|
Google Oneindia Kannada News

ಬೆಳಗಾವಿ, ಡಿ. 19: ವಿಧಾನಸಭೆಯಲ್ಲಿ ಅಂಗೀಕೃತಗೊಂಡಿರುವ ಏಳು ವಿಧೇಯಕಗಳನ್ನು ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಧ್ವನಿಮತಕ್ಕೆ ಹಾಕುವ ಮೂಲಕ ಅಂಗೀಕರಿಸಲಾಯಿತು. ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಅವರು ಧ್ವನಿಮತಕ್ಕೆ ಹಾಕುವ ಮೂಲಕ ವಿಧೇಯಕ ಅಂಗೀಕರಿಸಲಾಗಿದೆ ಎಂದು ತಿಳಿಸಿದರು.

೨೦೧೪ ರ ಕರ್ನಾಟಕ ಧನವಿನಿಯೋಗ ವಿಧೇಯಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಷತ್‌ನಲ್ಲಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ತಿದ್ದುಪಡಿ ವಿಧೇಯಕ, ೨೦೧೪ ನೇ ಸಾಲಿನ ಭಾರತ ಉತ್ತರಾಧಿಕಾರ ಕರ್ನಾಟಕ ತಿದ್ದುಪಡಿ ವಿಧೇಯಕ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ ತಿದ್ದುಪಡಿ ವಿಧೇಯಕವನ್ನು ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅಂಗೀಕಾರಕ್ಕಾಗಿ ಮಂಡಿಸಿದರು. [ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಉಚಿತ ವೈ ಫೈ]

cm

೨೦೧೩ ನೇ ಸಾಲಿನ ಕರ್ನಾಟಕ ಅತ್ಯವಶ್ಯಕ ಸೇವೆಗಳ ನಿರ್ವಹಣೆ ವಿಧೇಯಕವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಂಗೀಕಾರಕ್ಕಾಗಿ ಮಂಡಿಸಿದರು. ೨೦೧೪ ನೇ ಸಾಲಿನ ಕರ್ನಾಟಕ ಶಿಕ್ಷಣ ತಿದ್ದುಪಡಿ ವಿಧೇಯಕವನ್ನು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹಾಗೂ ೨೦೧೪ ನೇ ಸಾಲಿನ ಕರ್ನಾಟಕ ಪುರಸಭೆಗಳು ಕೆಲವು ಕಾನೂನು ತಿದ್ದುಪಡಿ ವಿಧೇಯಕವನ್ನು ಪೌರಾಡಳಿತ ಸಚಿವರ ಬದಲಿಗೆ ಕಾನೂನು ಸಚಿವರು ಪರಿಷತ್‌ನ ಅಂಗೀಕಾರಕ್ಕಾಗಿ ಮಂಡಿಸಿದರು. [ಉತ್ತರ ಕರ್ನಾಟಕ ಅಭಿವೃದ್ಧಿಗೆ ಬದ್ಧ : ಸಿಎಂ]

English summary
Seven bills accepted in Legislative Council on Friday which were already accepted by Legislative Assembly. Chairman of Legislative Council D H Shankaramurthy put bills for voice vote and got accept.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X