ಶನಿವಾರ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 15 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದು, ರೈತ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮಾವೇಶ ನಡೆಯಲಿದೆ.

ಹಿಂದಿನ ಸುದ್ದಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ರೈತರ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಬಿಜೆಪಿ ಘಟಕ ವಿವಿಧ ರಾಜ್ಯಗಳಲ್ಲಿ ರೈತರ ಸಮಾವೇಶಗಳನ್ನು ಆಯೋಜಿಸುತ್ತಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ರೈತರ ಸಮಾವೇಶ ಉದ್ದೇಶಿಸಿ ಮಾತನಾಡಲಿರುವ ಮೋದಿ ಅವರು, 'ಪ್ರಧಾನ್‌ ಮಂತ್ರಿ ಫಸಲ್‌ ಬಿಮಾ ಯೋಜನಾ (ಪಿಎಂಎಫ್‌ಬಿವೈ)' ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ. [ಮೋದಿ ಕನಸುಗಳು: ಸ್ವಚ್ಛಭಾರತದಿಂದ ಡಿಜಿಟಲ್ ಇಂಡಿಯಾ ತನಕ]

narendra modi

ಕೇಂದ್ರ ಬಿಜೆಪಿ ಘಟಕ ದೇಶದ ವಿವಿಧ ರಾಜ್ಯಗಳಲ್ಲಿ ಫೆಬ್ರವರಿ ತಿಂಗಳಿನಲ್ಲಿ 4 ರೈತ ಸಮಾವೇಶಗಳನ್ನು ಆಯೋಜಿಸಿವೆ. ಮಧ್ಯಪ್ರದೇಶ ಮತ್ತು ಓರಿಸ್ಸಾದಲ್ಲಿ ಸಮಾವೇಶಗಳು ಇನ್ನೂ ಎರಡು ಸಮಾವೇಶ ನಡೆಯಲಿವೆ. [ಫೆ.27ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ ಮೋದಿ]

ಫೆ.27ರ ಶನಿವಾರ ಈ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಪಾಲ್ಗೊಳ್ಳುವ ಮೋದಿ ಅವರು, ಪ್ರಧಾನ್‌ ಮಂತ್ರಿ ಫಸಲ್‌ ಬಿಮಾ ಯೋಜನಾ (ಪಿಎಂಎಫ್‌ಬಿವೈ)' ಬಗ್ಗೆ ರೈತರಿಗೆ ಮಾಹಿತಿ ನೀಡಲಿದ್ದಾರೆ.

ಏನಿದು ಯೋಜನೆ? : ಪ್ರಧಾನ್‌ ಮಂತ್ರಿ ಫಸಲ್‌ ಬಿಮಾ ಯೋಜನೆಗೆ ಕೇಂದ್ರ ಸರ್ಕಾರ ಕೆಲವು ದಿನಗಳ ಹಿಂದೆ ಒಪ್ಪಿಗೆ ನೀಡಿದೆ. ಈಗಾಗಲೇ ಜಾರಿಯಲ್ಲಿದ್ದ ರಾಷ್ಟ್ರೀಯ ಕೃಷಿ ವಿಮೆ ಯೋಜನೆ (ಎನ್‌ಎಐಎಸ್‌) ಮತ್ತು 'ಸುಧಾರಿತ ಎನ್‌ಎಐಎಸ್‌' ಯೋಜನೆಗಳಿಗೆ ಬದಲಾಗಿ ಈ ಹೊಸ ಯೋಜನೆ ಜಾರಿಗೊಳಿಸಲಾಗಿದೆ.

ಅತಿ ಕಡಿಮೆ ಪ್ರೀಮಿಯಂನ ಈ ಯೋಜನೆ ನಷ್ಟದ ತ್ವರಿತ ಅಂದಾಜು, ಕಾಲಮಿತಿಯೊಳಗೆ ಹಣ ಪಾವತಿ ಮುಂತಾದ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಯೋಜನೆ ಬಗ್ಗೆ ರೈತರಿಗೆ ಮಾಹಿತಿ ನೀಡಲು ದೇಶದ 4 ರಾಜ್ಯಗಳಲ್ಲಿ ಬಿಜೆಪಿ ಫೆಬ್ರವರಿ ತಿಂಗಳಿನಲ್ಲಿ ಕಿಸಾನ್ ಸಮಾವೇಶ ಆಯೋಜಿಸಿದೆ.

English summary
Karnataka BJP organized farmers rally at Belagavi on February 27, 2016. Prime Minister Narendra Modi will address the rally.
Please Wait while comments are loading...