ಅರೆನಗ್ನ ಚಿತ್ರ ವೀಕ್ಷಣೆ: ಸಚಿವ ತನ್ವೀರ್ ಸೇಠ್ ಗೆ ಕ್ಲೀನ್ ಚಿಟ್
ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಂದರ್ಭದಲ್ಲಿ ಅರೆನಗ್ನ ಚಿತ್ರ ವೀಕ್ಷಿಸಿದ ಆರೋಪ ಹೊತ್ತಿದ್ದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಸಿಐಡಿ ಸೈಬರ್ ವಿಭಾಗದ ತಂಡ ಕ್ಲೀನ್ ಚಿಟ್ ನೀಡಿದೆ.
ಸುವರ್ಣ ವಿಧಾನಸೌಧ(ಬೆಳಗಾವಿ), ನವೆಂಬರ್ 25: ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಸಂದರ್ಭದಲ್ಲಿ ಅರೆನಗ್ನ ಚಿತ್ರ ವೀಕ್ಷಿಸಿದ ಆರೋಪ ಹೊತ್ತಿದ್ದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರಿಗೆ ಸಿಐಡಿ ಸೈಬರ್ ವಿಭಾಗದ ತಂಡ ಕ್ಲೀನ್ ಚಿಟ್ ನೀಡಿದೆ.
ಸಿಐಡಿ ಸೈಬರ್ ದಳದಿಂದ ವಿಚಾರಣಾ ವರದಿಯನ್ನು ಸುವರ್ಣ ವಿಧಾನಸೌಧದಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಈ ವರದಿ ಪ್ರಕಾರ ತನ್ವೀರ್ ಸೇಠ್ ಗೆ ಫೋಟೋ ನೋಡೋ ಉದ್ದೇಶ ಇರಲಿಲ್ಲ, ವಾಟ್ಸಾಪ್ ನಲ್ಲಿ ಬಂದ ಚಿತ್ರಗಳನ್ನು ಸ್ಕ್ರೋಲ್ ಮಾಡಿ ನೋಡುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ.

ಸಚಿವ ತನ್ವೀರ್ ಸೇಠ್ ಅವರಿಗೆ ಅರೆನಗ್ನ ಫೋಟೋ ಕಳಿಸಿದವರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆ ಗ್ರೂಪಿನಲ್ಲಿ ಇಂಥ ಆಶ್ಲೀಲ ಸಂದೇಶಗಳು ಹಲವು ಬಾರಿ ಕಳಿಸಿದ್ದೆ ಎಂದು ಆ ವ್ಯಕ್ತಿ ಒಪ್ಪಿಕೊಂಡಿದ್ದಾನೆ.
ಜೊತೆಗೆ ತನ್ವಿರ್ ಸೇಠ್ ಅಶ್ಲಿಲ ಚಿತ್ರಗಳು ಬಂದಾಗ ಮಾತ್ರ ಮೊಬೈಲ್ ಬಳಸಿಲ್ಲ, ಫೋಟೊಸ್ ಬರೋಕು ಮೊದಲು ಮೊಬೈಲ್‍ನಲ್ಲಿ ಆಕ್ಟೀವ್ ಆಗಿದ್ರು. ಅಲ್ಲದೇ, ಫೋಟೋಗಳನ್ನ ಸ್ಕ್ರಾಲ್ ಮಾಡಿ ಮುಂದೆ ಹೋಗಿರೋದ್ರಿಂದ ತನ್ವೀರ್ ಸೇಠ್‍ಗೆ ಫೋಟೋ ನೋಡೋ ಉದ್ದೇಶ ಇರ್ಲಿಲ್ಲ ಎಂಬುವುದಾಗಿ ಸಿಐಡಿ ನಿರ್ಧರಿಸಿದೆ.
ನವೆಂಬರ್ 10 ರಂದು ರಾಯಚೂರಿನಲ್ಲಿ ನಡೆದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಿಸಿದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಬಳಿಕ ತಾನು ಉದ್ದೇಶಪೂರ್ವಕವಾಗಿ ನೋಡಿಲ್ಲ. ಟಿಪ್ಪು ಜಯಂತಿ ವಿರೋಧಿಸಿ ಗಲಾಟೆ, ಬೆಳವಣಿಗೆಗಳ ಬಗ್ಗೆ ವಾಟ್ಸಾಪ್ ಬಂದ ಸಂದೇಶಗಳನ್ನು ನೋಡುತ್ತಿದ್ದೆ ಎಂದು ಸೇಠ್ ಸ್ಪಷ್ಟನೆ ನೀಡಿದ್ದರು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications