ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು, ಶೀಘ್ರ ಸಭೆ

|
Google Oneindia Kannada News

ಬಳ್ಳಾರಿ, ಆ.12 : 'ತುಂಗಭದ್ರಾ ಜಲಾಶಯದಿಂದ ಜಲಾನಯನ ಪ್ರದೇಶಗಳಿಗೆ ನಾಲೆಗಳ ಮೂಲಕ ನೀರು ಹರಿಸುವ ಕುರಿತು ಸಭೆ ನಡೆಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, 'ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆ ಇದೆ, ಆದ್ದರಿಂದ ಕೃಷಿ ಬೆಳೆಯ ಕುರಿತು ಕೃಷಿ ಇಲಾಖೆಯವರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು' ಎಂದರು.

siddaramaiah

'ಆಲಮಟ್ಟಿ ಜಲಾಶಯ ತುಂಬಿದೆ, ಇದೇ ತಿಂಗಳ 18ರಂದು ಭಾಗೀನ ಸಲ್ಲಿಸಲಾಗುವುದು, ಮಳೆ ಕೊರತೆಯಿರುವ ಕಡೆಗಳಲ್ಲಿ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ' ಎಂದು ವಿವರಣೆ ನೀಡಿದರು.

'ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಆಯೋಗ ರಚಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದರು.

ರಾಯಚೂರಿನಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಸಮಾವೇಶ ಆಯೋಜಿಸಲಾಗಿತ್ತು. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾವೇಶಕ್ಕೆ ಆಗಮಿಸಿದ್ದರು. ಸಮಾವೇಶಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಅವರು ಬಳ್ಳಾರಿಗೆ ಬಂದು ಅಲ್ಲಿಂದ ರಾಯಚೂರಿಗೆ ತೆರಳಿದರು.

ರಾಯಚೂರಿನಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?ರಾಯಚೂರಿನಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

English summary
The Tungabhadra Irrigation Consultative Committee will meet soon to review its decision over releasing water from the Tungabhadra dam to the canals said Chief Minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X