Bengaluru Property: ಬೆಂಗಳೂರಿನಲ್ಲಿ ನಕ್ಷೆ ಮಂಜೂರಾತಿ ಪಡೆಯದ ಆಸ್ತಿದಾರರಿಗೆ ಜಿಬಿಎ ಶಾಕ್
ಬೆಂಗಳೂರು: ಬೆಂಗಳೂರಿನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿರ್ಮಿಸಿದ್ದ ಆಸ್ತಿದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಶಾಕ್ ನೀಡಿದೆ. ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡಿರುವವ ಆಸ್ತಿದಾರರಿಗೆ ಶಾಕ್ ನೀಡುವುದು ಮುಂದುವರಿದಿದೆ.
ಬೆಂಗಳೂರು ಪೂರ್ವ ನಗರ ಪಾಲಿಕೆಯ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ನಲ್ಲೂರಹಳ್ಳಿ, ವಿಕ್ಟೋರಿಯಾ ವ್ಯೂ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಲಾಯಿತು ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ.

ಮಹದೇವಪುರ ವಲಯದ ಜಂಟಿ ಆಯುಕ್ತರಾದ ಡಾ: ದಾಕ್ಷಾಯಿಣಿ ಕೆ. ಅವರ ನೇತೃತ್ವದಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದ್ದ ಆರು ಮಹಡಿ ಕಟ್ಟಡದ ತೆರವು ಕಾರ್ಯಾಚರಣೆಯನ್ನು ಗುರುವಾರ / ಜನವರಿ 22ರಂದು ನಡೆಸಲಾಗಿದೆ.
ತೆರವು ಕಾರ್ಯಾಚರಣೆ ನಡೆಸಲಾದ ಕಟ್ಟಡದ ವಿವರಗಳು
ಮಾಲೀಕರು ಹೆಸರು: ಶ್ರೀಕಾಂತ್ ರೆಡ್ಡಿ
ನಿವೇಶನದ ಸಂಖ್ಯೆ ಮತ್ತು ವಿಳಾಸ:02, ವಿಕ್ಟೋರಿಯಾ ವ್ಯೂ ಲೇಔಟ್, ನಲ್ಲೂರಹಳ್ಳಿ
ನಿವೇಶನದ ಅಳತೆ :1,600 ಚದರ ಅಡಿಗಳು
ಕಟ್ಟಡ: ತಳ ಮಹಡಿ ಸೇರಿದಂತೆ ಒಟ್ಟು 6 ಮಹಡಿಗಳ ಅನಧಿಕೃತ ಕಟ್ಟಡ
ಪಾಲಿಕೆ ಕಾರ್ಯಾಚರಣೆಯ ವಿವರ
ಗುರುವಾರ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಪಡೆಯದೆ ಕಟ್ಟಡ ನಿಯಮಾವಳಿಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿ ನಿರ್ಮಿಸಲ್ಪಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಮಾಲೀಕರಿಗೆ ಅಗತ್ಯ ನೊಟೀಸ್‌ಗಳನ್ನು ಜಾರಿಗೊಳಿಸಿದ ಬಳಿಕ ಸ್ವತ್ತಿನ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದ್ದರೂ, ಮಾಲೀಕರು ಅನಧಿಕೃತ ಕಟ್ಟಡವನ್ನು ಸ್ವಯಂ ತೆರವುಗೊಳಿಸದೆ ಇರುವುದರಿಂದ ಪೂರ್ವ ನಗರ ಪಾಲಿಕೆ ವೈಟ್ ಫೀಲ್ಡ್ ಉಪವಿಭಾಗ ವ್ಯಾಪ್ತಿಯ ಎಂಜಿನಿಯರ್ ವಿಭಾಗದ ಅಧಿಕಾರಿಗಳು ತೆರವು ಕಾರ್ಯಚರಣೆಯನ್ನು ನಡೆಸಿದ್ದಾರೆ.
ಕಾರ್ಯಾಚರಣೆ ವೇಳೆ ಅಗತ್ಯ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಬ್ರೇಕರ್ ಮತ್ತು ಕಂಪ್ರೆಸರ್ ಯಂತ್ರಗಳನ್ನು ಬಳಸಿಕೊಂಡು ತೆರವುಗೊಳಿಸಲು ಕ್ರಮ ವಹಿಸಲಾಯಿತು ಎಂದು ಆಯುಕ್ತರು ತಿಳಿಸಿದ್ದಾರೆ.
ನಗರ ಪಾಲಿಕೆಯ ಸ್ಪಷ್ಟ ನಿಲುವು
ಅಕ್ರಮ ಕಟ್ಟಡಗಳು ಸಾರ್ವಜನಿಕ ಸುರಕ್ಷತೆ ಮತ್ತು ಯೋಜಿತ ನಗರ ಅಭಿವೃದ್ಧಿಗೆ ಗಂಭೀರ ಅಪಾಯವನ್ನುಂಟು ಮಾಡುತ್ತವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ, ಕಟ್ಟಡ ನಿಯಮ ಉಲ್ಲಂಘನೆಗಳ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುತ್ತಿದ್ದು, ಮುಂದೆಯೂ ಇಂತಹ ಅಕ್ರಮ ನಿರ್ಮಾಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತರಾದ ಡಿ.ಎಸ್.ರಮೇಶ್ ಅವರು ಎಚ್ಚರಿಸಿದ್ದಾರೆ.
ಈ ಆಸ್ತಿದಾರರಿಗೆ ಮನವಿ
ಇನ್ನು ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣಕ್ಕೆ ಮೊದಲು ಅಗತ್ಯ ಅನುಮೋದನೆಗಳನ್ನು ಪಡೆಯುವಂತೆ, ಅನುಮೋದಿತ ನಕ್ಷೆ ಮತ್ತು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಗರ ಪಾಲಿಕೆಯು ನಾಗರಿಕರು, ಕಟ್ಟಡ ಮಾಲೀಕರು ಹಾಗೂ ಬಿಲ್ಡರ್‌ಗಳಿಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಮನವಿ ಮಾಡಿದೆ. ನಿಯಮ ಉಲ್ಲಂಘನೆಯು ಕಂಡುಬಂದಲ್ಲಿ ಕಾನೂನು ಕ್ರಮ ಅನಿವಾರ್ಯವಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications