ಸಿಸಿಟಿವಿಯಲ್ಲಿ ಪರಮೇಶ್ವರ್ ಆಪ್ತ ರಮೇಶ್ ಸಾವಿನ ಮುಂಚಿನ ಕ್ಷಣಗಳು ದಾಖಲು
ಬೆಂಗಳೂರು, ಅಕ್ಟೋಬರ್ 12: ಪರಮೇಶ್ವರ್ ಆಪ್ತ ರಮೇಶ್ ಆತ್ಮಹತ್ಯೆ ಸಂಚಲನ ಸೃಷ್ಟಿಸಿದ್ದು, ಸಾವಿನ ಸುತ್ತಾ ಅನುಮಾನದ ಹುತ್ತ ಹುಟ್ಟಿಕೊಳ್ಳುತ್ತಿದೆ.
ರಮೇಶ್ ಅವರು ಸಾಯುವ ನಿರ್ಣಯ ತಳೆಯುವ ಸ್ವಲ್ಪ ಸಮಯದ ಮುಂಚೆಯ ಸಿಸಿಟಿವಿ ದೃಶ್ಯಾವಳಿಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ.
ಇಂದು ಬೆಳಿಗ್ಗೆ 9 ಗಂಟೆಗೆ ವೇಳೆಗೆ ಉಲ್ಲಾಳದ ತಮ್ಮ ಮನೆಯಿಂದ ರಮೇಶ್ ಚೌಕಳಿ ಶರ್ಟ್ ಧರಿಸಿ ಹೊರ ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಳಿಗ್ಗೆ ಸದಾಶಿವನಗರದ ಪರಮೇಶ್ವರ್ ಮನೆಯಿಂದ ಹೊರಬಂದ ರಮೇಶ್ ನೇರವಾಗಿ ತಮ್ಮ ಮನೆಗೆ ಬಂದು ಉಪಾಹಾರ ಸೇವಿಸಿ ಮನೆಯವರಿಗೆ ಟಾ-ಟಾ ಮಾಡುತ್ತಾ ಹೊರಗೆ ಹೋಗುತ್ತಿರುವ ದೃಶ್ಯ ಮನೆಯ ಬಳಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ರಮೇಶ್ ಹೋದ ಕೆಲವೇ ನಿಮಿಷದಲ್ಲಿ ಇನ್ನೋವಾ ಕಾರೊಂದರಲ್ಲಿ ರಮೇಶ್ ಅವರ ಮನೆಗೆ ಕೆಲವು ಐಟಿ ಅಧಿಕಾರಿಗಳು ಬರುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಧಿಕಾರಿಗಳು ಮನೆಯ ಒಳಕ್ಕೆ ಹೋಗುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಧಿಕಾರಿಗಳು ತಮ್ಮ ಮನೆಗೆ ಬಂದ ಸುದ್ದಿ ತಿಳಿದ ನಂತರವೇ ರಮೇಶ್ ಸಾಯುವ ನಿರ್ಧಾರ ಮಾಡಿದರೆ ಎಂಬ ಅನುಮಾನ ಈಗ ಕಾಡುತ್ತಿದೆ.
ಐಟಿ ಅಧಿಕಾರಿಗಳು ಮನೆಗೆ ಬಂದ ವಿಷಯ ತಿಳಿದ ನಂತರವೇ ರಮೇಶ್ ಸಾಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದ್ದು, ತಮ್ಮ ಗೆಳೆಯರಿಗೆ ಮಾಹಿತಿ ನೀಡಿ, ಪೊಲೀಸರಿಗೂ ಮಾಹಿತಿ ನೀಡಿ ನೇಣು ಹಾಕಿಕೊಂಡಿದ್ದಾರೆ.
ತಮ್ಮ ಡೆತ್ ನೋಟ್ನಲ್ಲಿ ಐಟಿ ಅಧಿಕಾರಿಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ಐಟಿ ಅಧಿಕಾರಿಗಳು ನಮ್ಮ ಮನೆಯ ಮೇಲೆ ದಾಳಿ ಮಾಡಿದ್ದರಿಂದ ದಿಗ್ಬ್ರಾಂತನಾಗಿದ್ದೇನೆ ಎಂದು ಸಹ ಬರೆದುಕೊಂಡಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications