ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೈಲ್ವೆನಿಲ್ದಾಣದಲ್ಲಿ ಚಾಪೆ ಹಾಕಿ ಮಲಗಿ ಪ್ರತಿಭಟಿಸಲಿರುವ ವಾಟಾಳ್!

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಆಗಸ್ಟ್ 7: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಿಗೆ ಸಂಪರ್ಕ ಸೇತುವಾಗಿರುವ ಚಾಮರಾಜನಗರದಲ್ಲಿ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ ಆ.13 ರಂದು ಚಾಮರಾಜನಗರ ರೈಲ್ವೆ ನಿಲ್ದಾಣದಲ್ಲಿ ಚಾಪೆ ಹಾಸಿಕೊಂಡು ಮಲಗಿ ಪ್ರತಿಭಟನೆ ನಡೆಸುವುದಾಗಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

ಕಾಡಾನೆ ಉಪಟಳ ತಡೆಗೆ ರೈಲ್ವೆ ಕಂಬಿಯ ಬ್ಯಾರಿಕೇಡ್ ಕಾಡಾನೆ ಉಪಟಳ ತಡೆಗೆ ರೈಲ್ವೆ ಕಂಬಿಯ ಬ್ಯಾರಿಕೇಡ್

ಆಗಸ್ಟ್ 6 ರಂದು ಚಾಮರಾಜನಗರ ರೈಲ್ವೆ ನಿಲ್ದಾಣದ ವ್ಯವಸ್ಥೆಗಳನ್ನು ವೀಕ್ಷಿಸಿದ ವಾಟಾಳ್ ನಾಗರಾಜ್, ಪ್ಲಾಟ್‍ಫಾರಂನಲ್ಲಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ರೈಲ್ವೆ ಇಲಾಖೆ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

Chamarajanagar: Vathal Nagaraj will protests on 13th Aug against Railway department

ಚಾಮರಾಜನಗರ ಜಿಲ್ಲೆ ಮೂರು ರಾಜ್ಯಗಳ ಸಂಪರ್ಕ ಇರುವ ಜಿಲ್ಲೆಯಾಗಿದ್ದು, ಇಲ್ಲಿಂದ ಕೇರಳ ಮತ್ತು ತಮಿಳುನಾಡಿಗೆ ರೈಲ್ವೆ ಮಾರ್ಗ ಕಲ್ಪಿಸಿದಾಗ ಉತ್ತಮವಾಗಿರುತ್ತದೆ. ನಾಮಕಾವಸ್ಥೆಯಂತೆ ಸರ್ವೆ ಮಾಡಿದ್ದಾರೆ ಆದರೆ ಇನ್ನೂ ಜಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಲೋಕಸಭಾ ಸದಸ್ಯರು ರಾಜ್ಯದ ರೈಲ್ವೆ ಯೋಜನೆಗಳನ್ನು ಅನುಷ್ಠಾನಕ್ಕೆ ಕೇಂದ್ರ ಸರ್ಕಾರವು ವಿಳಂಬ ನೀತಿಯನ್ನು ಅನುಸರಿಸುತ್ತಿರುವ ಬಗ್ಗೆ ಚಕಾರ ಎತ್ತದೆ ಇರುವುದು ಅನುಮಾನ ಮೂಡಿಸಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಮೆಟ್ಟುಪಾಳ್ಯಂ ಹಾಗೂ ಬೆಂಗಳೂರು ಕನಕಪುರ ಮಾರ್ಗವಾಗಿ ಚಾಮರಾಜನಗರ ರೈಲ್ವೆ ಮಾರ್ಗಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

English summary
President of Kannada Vathal Party, Vathal Nagaraaj has decided to protest against Railway department by sleeping in Chamarajanagr railway station. He will be protesting on August 13th against delay of implementing various railway schemes in the state
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X