ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭ್ರಷ್ಟಾಚಾರ ತಾಂಡವ, ಆರ್‌ ಕೆ ನಗರ ಉಪಚುನಾವಣೆ ರದ್ದು!

ಮತದಾರರನ್ನು ಸೆಳೆಯಲು ಭಾರಿ ಪ್ರಮಾಣದಲ್ಲಿ ಅಕ್ರಮ ಹಣ ಹಂಚಿಕೆಯಾಗಿದೆ ಎಂಬ ಆರೋಪ ಹಿನ್ನಲೆಯಲ್ಲಿ ಏಪ್ರಿಲ್ 12ರಂದು ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.

|
Google Oneindia Kannada News

ನವದೆಹಲಿ, ಏಪ್ರಿಲ್. 10 : ಜಯಲಲಿತಾ ಸಾವಿನ ಕಾರಣ ತೆರವಾಗಿದ್ದ ತಮಿಳುನಾಡಿನ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರಕ್ಕೆ ಇದೇ ಏಪ್ರಿಲ್ 12ರಂದು ನಡೆಯಬೇಕಿದ್ದ ಉಪಚುನಾವಣೆಯನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ.

ಮತದಾರರನ್ನು ಸೆಳೆಯಲು ಭಾರಿ ಪ್ರಮಾಣದಲ್ಲಿ ಅಕ್ರಮ ಹಣ ಹಂಚಿಕೆಯಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಆಯೋಗ ಉಪಚುನಾವಣೆಯನ್ನು ರದ್ದುಗೊಳಿಸಲು ತೀರ್ಮಾನಿಸಿದೆ.

Election commission has cancelled chennai's RK Nagar by election -corruption charges

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರ ಸಂಬಂಧಿ, ಅಭ್ಯರ್ಥಿ ಟಿಟಿವಿ ದಿನಕರನ್ ಅವರ ಪರ ಮತದಾರರಿಗೆ ಹಣ ಹಂಚಲು ಪಕ್ಷದ ನಾಯಕರು ತಮ್ಮ ಖಾತೆಗಳಿಂದ 89 ಕೋಟಿ ರು. ಹಣ ವರ್ಗಾವಣೆ ಮಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.

ಸಚಿವ ವಿಜಯಭಾಸ್ಕರ್‌ ಅವರಿಗೆ ಸೇರಿದ ಆಸ್ತಿಗಳು ಸೇರಿದಂತೆ ಒಟ್ಟು 35 ಕಡೆಗಳಲ್ಲಿ ಶುಕ್ರವಾರ ನಡೆಸಿದ ದಾಳಿ ಸಂದರ್ಭದಲ್ಲಿ ಈ ಬಗ್ಗೆ ದಾಖಲೆಗಳು ಲಭ್ಯವಾಗಿವೆ. ಈ ಹಿನ್ನಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿದ ಆಯೋಗ ಚುನಾವಣೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ.

English summary
By-elections in Chennai's RK Nagar constituency - to be held on Wednesday - have been cancelled by the Election Commission a day after cash-for-votes allegations surfaced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X