Vani Vilasa Sagara Dam: ಹೊಸ ಇತಿಹಾಸ ಸೃಷ್ಟಿಸಿದ ಇತಿಹಾಸ ಪ್ರಸಿದ್ಧ ವಾಣಿ ವಿಲಾಸ ಸಾಗರ ಜಲಾಶಯ
Vani Vilasa Sagara Dam: ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ತಾಲೂಕಿನ ವಾಣಿ ವಿಲಾಸ ಸಾಗರ ಡ್ಯಾಂ ರಾಜ್ಯದ ಹಳೇ ಅಣೆಕಟ್ಟುಗಳಲ್ಲಿ ಒಂದಾಗಿದೆ. ಇದೀಗ ಕೊನೆಗೂ ಕೋಡಿ ಬೀಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ. ಹಾಗಾದ್ರೆ ಇಂದು (ಅಕ್ಟೋಬರ್ 21) ನೀರಿನ ಮಟ್ಟ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೋಟೆನಾಡು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿರುವ ಈ ಜಲಾಶಯ ಈಗಾಗಲೇ 2025ರ ಜನವರಿಯಲ್ಲಿ ಮೊದಲ ಬಾರಿಗೆ ಭರ್ತಿಯಾಗಿತ್ತು. ಇದೀಗ ಮತ್ತೆ ಕೋಡಿ ಬಿದ್ದಿದ್ದು, ಈ ಮೂಲಕ ಇದೇ ವರ್ಷದಲ್ಲಿ ಎರಡನೇ ಬಾರಿ ತುಂಬಿದೆ. ಮತ್ತೊಂದೆಡೆ ಇದುವರೆಗೆ ನಾಲ್ಕನೇ ಬಾರಿಗೆ ಕೋಡಿ ಬಿದ್ದ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ವಾಣಿ ವಿಲಾಸ ಸಾಗರ ಜಲಾಶಯವನ್ನು 'ಮಾರಿಕಣಿವೆ' ಅಂತಲೂ ಕರೆಯಲಾಗುತ್ತದೆ. ಇದನ್ನು ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಲಾಗಿದೆ. ಇದೀಗ ಈ ಜಲಾಶಯ ಇದುವರೆಗೂ ನಾಲ್ಕನೇ ಬಾರಿಗೆ ಭರ್ತಿಯಾಗಿ ಹೊಸ ಇತಿಹಾಸ ಬರೆದಿದೆ.
2025ರ ಆರಂಭದಲ್ಲಿ ಅಂದರೆ ಜನವರಿಯಲ್ಲಿ ವಾಣಿ ವಿಲಾಸ ಜಲಾಶಯ ಕೋಡಿ ಬಿದ್ದಿತ್ತು. ಅದು ಮಳೆ ನೀರಿನಿಂದಲ್ಲ, ಭದ್ರ ಡ್ಯಾಂನಿಂದ ಬಿಟ್ಟ ನೀರಿನಿಂದ. ಇನ್ನೂ ಇದೀಗ ಪ್ರಸ್ತುತ ಅಕ್ಟೋಬರ್ 21 ನೀರಿನ ಮಟ್ಟ 130 ಅಡಿ ಭರ್ತಿಯಾಗಿ ಕೋಡಿ ಬಿದ್ದಿದೆ. ಜಲಾಶಯದ ನೀರಿನ ಸಂಗ್ರಹಣಾ ಸಾಮರ್ಥ್ಯ 130 ಅಡಿ (30 ಟಿಎಂಸಿ) ಆಗಿದ್ದು, ಇದೀಗ ನೀರಿನ ಮಟ್ಟ 130 ಅಡಿ ಇದೆ.
ಯಾವ್ಯಾವಾಗ ಡ್ಯಾಂ ಭರ್ತಿ?: 1933ರಲ್ಲಿ ಜಲಾಶಯಕ್ಕೆ 135.25 ಅಡಿ ನೀರು ಸಂಗ್ರಹ ಆಗುವ ಮೂಲಕ ಮೊದಲ ಬಾರಿಗೆ ಕೋಡಿ ಬಿದ್ದು, ಇತಿಹಾಸ ಸೃಷ್ಟಿಸಿತ್ತು. ಬಳಿಕ 2022ರಲ್ಲಿ 135, 2025ರ ಜನವರಿ ತಿಂಗಳಲ್ಲಿ 130 ಅಡಿ ನೀರು ಬಂದಿದ್ದು, ಈ ವೇಳೆ ಕೋಡಿ ಬಿದ್ದು ಮೂರನೇ ಬಾರಿ ದಾಖಲೆ ಸೃಷ್ಟಿಸಿತ್ತು. ಇದೀಗ ಮತ್ತೆ ಇದೇ ವರ್ಷದ ಅಕ್ಟೋಬರ್‌ನಲ್ಲಿ ಭರ್ತಿಯಾಗಿದೆ. ಈ ಮೂಲಕ ಇದೇ ವರ್ಷದಲ್ಲಿ ಎರಡು ಬಾರಿ ಕೋಡಿ ಬಿದ್ದ ಹೆಗ್ಗಳಿಗೆ ಪಡೆದುಕೊಂಡಿದೆ.
ಯಾವ ವರ್ಷ ನೀರಿನ ಮಟ್ಟ ಎಷ್ಟು?: 1917ರಲ್ಲಿ 120.60 ಅಡಿ, 1918 - 121.30, 1919 - 128.30, 1920 - 125.50, 1932 - 125.50, ಅಡಿ, 1933 - 135.25 ಅಡಿ, 1934 - 130.24 ಅಡಿ, 1935 - 123.22 ಅಡಿ, 1956 - 125 ಅಡಿ, 1957 - 125.05 ಅಡಿ, 1958 - 124.50 ಅಡಿ, 2000 - 122.50 ಅಡಿ, 2021 - 125.50 ಅಡಿ, 2022 - 135 ಅಡಿ, 2024ರಲ್ಲಿ 128.40 ಅಡಿ, 2025 ಜನವರಿಯಲ್ಲಿ 130 ಅಡಿ, 2025ರ ಅಕ್ಟೋಬರ್‌ನಲ್ಲಿ 130 ಅಡಿ ನೀರು ಸಂಗ್ರವಾಗಿದೆ.
1907ರಲ್ಲಿ ನಿರ್ಮಾಣ ಆಗಿರುವ ಈ ಡ್ಯಾಂಗೆ ಸುಮಾರು 117 ವರ್ಷಗಳ ಕಾಲ ಇತಿಹಾಸ ಇದೆ. ಚಿಕ್ಕಮಗಳೂರು ಜಿಲ್ಲೆಯ ಬಾಬು ಬುಡನ್ ಗಿರಿ ಕಂದಕಗಳಲ್ಲಿ ಜನಿಸುವ "ವೇದಾ" ನದಿ ಕಡೂರಿನ ಬಳಿ "ಅವತಿ" ಎಂಬ ನದಿಯನ್ನು ಸೇರಿ ಮುಂದೆ 'ವೇದಾವತಿ' ನದಿಯಾಗಿ ಹರಿಯುತ್ತದೆ. ಇದು ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜೀವನಾಡಿಯಾಗಿದೆ.
-
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications