Arecanut Price: ಅಡಿಕೆ ಬೆಳಗಾರರಿಗೆ ಸಂತಸದ ಸುದ್ದಿ: ಇಳಿಮುಖದತ್ತ ಸಾಗಿದ್ದ ಧಾರಣೆ ಭರ್ಜರಿ ಏರಿಕೆ
Arecanut Price: ಕಳೆದ ಕೆಲ ವಾರಗಳಿಂದ ಇಳಿಮುಖದತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಜನವರಿ 20) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಾವಣಗೆರೆ ಜಿಲ್ಲೆಯಲ್ಲಿ ಕೊಯ್ಲು ಮುಕ್ತಾಯದ ಸಮಯದಲ್ಲೇ ಅಡಿಕೆ ಧಾರಣೆ ಏರಿಕೆಯತ್ತ ಹೊರಟಿತ್ತು. ಬಳಿಕ ಇದ್ದಕ್ಕಿದ್ದಂತೆ ದರ ಕುಸಿತ ಕಂಡಿದ್ದು, ಬೆಳೆಗಾರರ ಮುಖದಲ್ಲಿನ ಸಂತಸ ಕಿತ್ತುಕೊಂಡಿತ್ತು. ಆದರೆ, ಇದೀಗ ಮತ್ತೆ ಏರಿಕೆಯಾಗಿದ್ದು, ಬೆಳಗಾರರಲ್ಲಿದ್ದ ಆತಂಕವನ್ನು ದೂರ ಮಾಡಿದೆ.

ಈ ವರ್ಷ ಕೆಲವರು ಹಸಿ ಅಡಿಕೆ ಮಾರಾಟ ಮಾಡಿ ಲಾಭ ಮಾಡಿಕೊಂಡಿದ್ದರು. ಆದರೆ, ಖೇಣಿ ಕೊಟ್ಟವರು ಸಲ್ಪ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. ಯಾಕಂದ್ರೆ, ಖೇಣಿ ಕೊಡುವ ವೇಳೆ ದರ ಭಾರೀ ಪ್ರಮಾಣದಲ್ಲಿ ಇಳಿಕೆ ಆಗಿತ್ತು. ಆದರೆ, ಇದೀಗ ಭರ್ಜರಿ ಏರಿಕೆಯಾಗಿದೆ.
ಅಡಿಕೆ ಧಾರಣೆ ಏರಿಕೆ: ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಜನವರಿ 20) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 56,699 ರೂಪಾಯಿ, ಕನಿಷ್ಠ ದರ 44,500 ರೂಪಾಯಿ ಇದ್ದು, ಸರಾಸರಿ ಬೆಲೆ 55,350 ರೂಪಾಯಿ ಆಗಿದೆ. ಈ ಮೂಲಕ ಧಾರಣೆಯಲ್ಲಿ ಕಳೆದ ಹಿಂದಿನ ದಿನಕ್ಕೆ ಹೋಲಿಕೆ ಮಾಡಿದ್ರೆ ಚೇತರಿಕೆ ಕಂಡಿದೆ.
ನವೆಂಬರ್ ತಿಂಗಳ ಆರಂಭದಲ್ಲಿ ಕ್ವಿಂಟಲ್ ಅಡಿಕೆ ಧಾರಣೆ 60,000 ರೂಪಾಯಿ ಇತ್ತು. ಡಿಸೆಂಬರ್ ಆರಂಭ ಆಗುತ್ತಿದ್ದಂತೆ 55,000 ಸಾವಿರ ರೂಪಾಯಿಗೆ ಕುಸಿತ ಕಂಡಿತ್ತು. 2026ರ ಜನವರಿ ಮೂರನೇ ವಾರದವರೆಗೂ ಇಳಿಕೆಯತ್ತ ಸಾಗಿದ್ದು, ಇದೀಗ ನಾಲ್ಕನೇ ವಾರದಲ್ಲಿ ದಿಢೀರ್ ಏರಿಕೆಯಾಗಿದೆ. ಇದರಿಂದ ಬೆಳೆಗಾರ ಬಾಯಿಗೆ ಸಕ್ಕರೆ ಹಾಕಿದಂತಾಗಿದೆ.
ಈ ವರ್ಷ ಕೊಯ್ಲು ಆರಂಭದಿಂದಲೂ ದರದಲ್ಲಿ ಭಾರೀ ಏರಿಕೆ ಆಗಿತ್ತು. ಆದರೆ, ವರ್ಷದ ಕೊನೇ ತಿಂಗಳು ಅಂದರೆ ಡಿಸೆಂಬರ್ ಮಧ್ಯದವರೆಗೂ ಇಳಿಕೆ ಕಂಡಿದ್ದು, ಬೆಳೆಗಾರರಿಗೆ ಆತಂಕ ಹೆಚ್ಚಾಗಿತ್ತು. ಆದರೆ, ಜನವರಿ ಆರಂಭದಲ್ಲಿ ಧಾರಣೆ ಏರಿಕೆಯತ್ತ ಹೊರಟಿತ್ತು. ಬಳಿಕ ಮತ್ತೆ ಆಡಿದ್ದ ಆಟ ಎಂಬಂತೆ ಇಳಿಕೆಯಾಗಿ ಇದೀಗ ಮತ್ತೆ ಏರಿಕೆಯಾಗಿದೆ. ಬೆಳೆಗಾರರು ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆಯಲ್ಲಿದ್ದಾರೆ.
ತಿಂಗಳವಾರು ಅಡಿಕೆ ದಾರಣೆ: ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಭಾಗದಲ್ಲಿ ಕಳೆದ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಡೆ ಇದ್ದ ಕ್ವಿಂಟಾಲ್ ಅಡಿಕೆ ಧಾರಣೆ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆ ಆಗುತ್ತಲೇ ಇತ್ತು. ಕೊನೆಗೂ ಏಪ್ರಿಲ್ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು.
ಅಕ್ಟೋಬರ್ ನಾಲ್ಕನೇ ವಾರದ ಆರಂಭದಲ್ಲಿ 70,000 ರೂಪಾಯಿ ಸಮೀಪದತ್ತ ಬಂದಿತ್ತು. ಇನ್ನೇನು ಕೆಲವೇ ದಿನಗಳಲ್ಲಿ 70,000 ರೂಪಾಯಿ ಮುಟ್ಟುತ್ತದೆ ಅನ್ನುವಷ್ಟರಲ್ಲೇ ಧಾರಣೆ ಇಳಿಕೆಯಾಗಿತ್ತು. 2026ನೇ ವರ್ವಷ ಆರಂಭದಲ್ಲಿ ಧಾರಣೆಯಲ್ಲಿ ಭಾರೀ ಸುಧಾರಣೆ ಕಂಡಿತ್ತು. ಬಳಿಕ ಕುಸಿತ ಕಂಡಿದ್ದು, ನಾಲ್ಕನೇ ವಾರದಲ್ಲಿ ಮತ್ತೆ ಏರಿಕೆಯಾಗಿದೆ.
ಮೇ ತಿಂಗಳ ಆರಂಭದಿಂದಲೂ ಜೂನ್ ತಿಂಗಳ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನು 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ತಲುಪಿತ್ತು.
2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಜುಲೈಗೆ ಹೋಲಿಕೆ ಮಾಡಿದರೆ, ಆಗಸ್ಟ್‌ನಲ್ಲಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿತ್ತು. ಆದರೆ, ಕೊನೆಯಲ್ಲಿ ತುಸು ಇಳಿಕೆಯಾಗಿ ಮತ್ತೆ ಸೆಪ್ಟೆಂಬರ್ ಅಂತ್ಯದಲ್ಲಿ ತುಸು ಏರಿಕೆಯತ್ತ ಹೊರಟ್ಟಿತ್ತು. ಅಕ್ಟೋಬರ್ ಅಂತ್ಯದವರೆಗೂ ಸತತವಾಗಿ ಏರಿಕೆ ಹಾದಿ ಹಿಡಿದಿತ್ತು.
ಬಳಿಕ ಸತತ ಇಳಿಕೆಯ ಹಾದಿ ಹಿಡಿದಿದ್ದು, ನವೆಂಬರ್ ಮಧ್ಯದಿಂದ ಸತತ ಭರ್ಜರಿ ಏರಿಕೆಯತ್ತ ಹೊರಟಿತ್ತು. ಆದರೆ, ಡಿಸೆಂಬರ್ ಮಧ್ಯದಲ್ಲಿ ಅದೇ ಆಡಿದ್ದೇ ಆಟ ಎಂಬಂತೆ ಭಾರೀ ಪ್ರಮಾಣದಲ್ಲಿ ಇಳಿಕೆ ಆಗುತ್ತಲೇ ಬಂದಿತ್ತು. ಇನ್ನೂ 2026ರ ಜನವರಿ ನಾಲ್ಕನೇ ವಾರದಲ್ಲು ಮತ್ತೆ ಭರ್ಜರಿ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಭರವಸೆ ಬೆಳೆಗಾರರದ್ದಾಗಿದೆ.
-
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications