ಜ.19ರಿಂದ ಹುಬ್ಬಳ್ಳಿಯಲ್ಲಿ ಅಭಿವೃದ್ಧಿ ಸಂವಾದ
ಹುಬ್ಬಳ್ಳಿ, ಜ.17 : ಹುಬ್ಬಳ್ಳಿಯ ಪ್ರತಿಷ್ಠಿತ ದೇಶಪಾಂಡೆ ಫೌಂಡೇಷನ್ ಏಳನೇ ವರ್ಷದ ಅಭಿವೃದ್ಧಿ ಸಂವಾದ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿದೆ. ಜ.19ರಿಂದ 22ರವರೆಗೆ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಸಾಧನೆಯ ಪರಾಮರ್ಶೆ ಎಂಬ ಶೀರ್ಷಿಕೆ ಅಡಿಯಲ್ಲಿ ಸಂವಾದ ಕಾರ್ಯಕ್ರಮ ನಡೆಯಲಿದೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇಶಪಾಂಡೆ ಫೌಂಡೇಷನ್ ಸಂಸ್ಥಾಪಕ ಗುರುವಾರ ದೇಶಪಾಂಡೆ, ಆರು ವರ್ಷಗಳಲ್ಲಿ ಅಭಿವೃದ್ಧಿ ಸಂವಾದದ ಮೂಲಕ ಹುಬ್ಬಳ್ಳಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಆಗಿದೆ. 2014ರ ಸಂವಾದ ಕಾರ್ಯಕ್ರಮಕ್ಕೆ ನಾವು ಸಜ್ಜಾಗುತ್ತಿದ್ದೇವೆ ಎಂದು ತಿಳಿಸಿದರು.
ಈ ವರ್ಷದ 'ಅಭಿವೃದ್ಧಿ ಸಂವಾದ' ಜ.19ರಿಂದ 22ರವರೆಗೆ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ದೇಶಪಾಂಡೆ ಫೌಂಡೇಷನ್ ಆವರಣದಲ್ಲಿ ನಡೆಯಲಿದೆ ಎಂದು ಗುರುದೇಶಪಾಂಡೆ ಹೇಳಿದರು. 'ಸಾಧನೆಯ ಪರಾಮರ್ಶೆ' ಎಂಬ ವಿಷಯವನ್ನು ಆಧರಿಸಿ ಈ ವರ್ಷದ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು. [ದೇಶಪಾಂಡೆ ಫೌಂಡೇಷನ್ ವೆಬ್ ಸೈಟ್]
ಜ.19ರಂದು 'ಯುವ ಶೃಂಗ ಸಭೆ' ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಆಗಮಿಸುವ 60ಕ್ಕೂ ಹೆಚ್ಚು ವಿದ್ಯಾರ್ಥಿಗಳ ಯೋಜನೆಗಳು ಪ್ರದರ್ಶನಗೊಳ್ಳಲಿವೆ. ಇವುಗಳಲ್ಲಿ ಆಯ್ದ ಯೋಜನೆಗಳಿಗೆ ಬಹುಮಾನ ವಿತರಣೆ ಮಾಲಾಗುವುದುದು ಎಂದು ಗುರು ದೇಶಪಾಂಡೆ ಮಾಹಿತಿ ನೀಡಿದರು.
'ದೇಶಪಾಂಡೆ ಫೌಂಡೇಷನ್ನಿನ 'ಲೀಡ್' ಸಂಸ್ಥೆಯ ಹಳೆ ವಿದ್ಯಾರ್ಥಿಗಳ ಸಮ್ಮೇಳನವನ್ನು ಉದ್ಯಮಿ ಸುಹಾಸ್ ಗೋಪಿನಾಥ್ ಜ.19ರಂದು ಮುಂಜಾನೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ. ರಾಜ್ಯದ ಐದು ವಿಶ್ವವಿದ್ಯಾಲಯಗಳ ಕುಲಪತಿಗಳ ಜೊತೆ ಅಂದು 12 ಗಂಟೆಗೆ ಸಂವಾದ ನಡೆಯಲಿದೆ ಎಂದರು.
ಜ.20ರಂದು ಅಭಿವೃದ್ಧಿ ಸಂವಾದ : ಜ.20ರಂದು ಬೆಳಗ್ಗೆ 9 ಗಂಟೆಗೆ ಅಭಿವೃದ್ಧಿ ಸಂವಾದ ಉದ್ಘಾಟನೆಯಾಗಲಿದ್ದು, ಕೇಂದ್ರ ಸಚಿವ ಜೈರಾಮ್ ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕೆನಡಾದ ಹೈ ಕಮಿಷನರ್ ಸ್ಟಿವರ್ಟ್ ಬೆಕ್, 'ಪ್ರದಾನ್' ಸಹ ಸಂಸ್ಥಾಪಕ ದೀಪ್ ಜೋಶಿ, ಮಣಿಪಾಲ ಗ್ಲೋಬಲ್ ಎಜುಕೇಷನ್ನ ಅಧ್ಯಕ್ಷ ಟಿ.ವಿ.ಮೋಹನದಾಸ ಪೈ ಮುಂತಾದವರು ಭಾಗವಹಿಸುವರು ಎಂದು ಹೇಳಿದರು.
ಜ.21ರ ಕಾರ್ಯಕ್ರಮ : ಜ.21ರಂದು 9.30ಕ್ಕೆ ತಂತ್ರಜ್ಞಾನ ವಿಷಯದ ಬಗ್ಗೆ ಗೋಷ್ಠಿಗಳು ನಡೆಯಲಿದ್ದು, ರಾಜ್ಯ ಆಡಳಿತ ಸುಧಾರಣೆ ಇಲಾಖೆಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಗಸ್ತ್ಯ ಫೌಂಡೇಷನ್ನ ಕೆ.ತ್ಯಾಗರಾಜನ್ ಮತ್ತಿತರರು ಪಾಲ್ಗೊಳ್ಳುವರು ಎಂದರು. ಅಂದು ಸಂಜೆ 4 ಗಂಟೆಗೆ ನಡೆಯಲಿರುವ ಗೋಷ್ಠಿಯಲ್ಲಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಪ್ರಾಸ್ತಾವಿಕವಾಗಿ ಮಾತನಾಡುವರು ಎಂದು ತಿಳಿಸಿದರು.
ಜ.22ರ ಕಾರ್ಯಕ್ರಮ : ಜ.22ರಂದು ಕೃಷಿ ಸಿಂಚನ ಸಮ್ಮೇಳನ ನಡೆಯಲಿದ್ದು, ಇದು ಸಂಪೂರ್ಣ ಕನ್ನಡ ಭಾಷೆಯಲ್ಲಿ ನಡೆಯಲಿದೆ. ಸುಮಾರು ಎರಡು ಸಾವಿರ ಮಂದಿ ರೈತರು ಈ 'ಕೃಷಿ ಸಿಂಚನ' ಕಾರ್ಯಕ್ರಮ ಭಾಗವಹಿಸಲಿದ್ದಾರೆ ಎಂದು ದೇಶಪಾಂಡೆ ಹೇಳಿದರು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ













Click it and Unblock the Notifications