ಚಿತ್ರಗಳು : ತವರಿನಲ್ಲಿ ವೀರಯೋಧನಿಗೆ ಅಂತಿಮ ನಮನ

Written by: ಹುಬ್ಬಳ್ಳಿ ಪ್ರತಿನಿಧಿ
Subscribe to Oneindia Kannada

ಹುಬ್ಬಳ್ಳಿ, ಫೆಬ್ರವರಿ 12 : ವಿಶ್ವದ ಅತ್ಯಂತ ಎತ್ತರದ ಮತ್ತು ಅತ್ಯಂತ ಅಪಾಯಕಾರಿ ಯುದ್ಧಭೂಮಿ ಸಿಯಾಚಿನ್‌ ಪ್ರದೇಶದಲ್ಲಿ ಹಿಮಪಾತಕ್ಕೆ ಸಿಲುಕಿ ಆರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದ ಧೀರ ಹನುಮಂತಪ್ಪ ಕೊಪ್ಪದನನ್ನು ಉಳಿಸುವ ವೈದ್ಯರ ಪ್ರಯತ್ನ ಯಶಸ್ವಿಯಾಗಲಿಲ್ಲ. [ಚಿತ್ರಗಳು : ವೀರಯೋಧನಿಗೆ ಅಂತಿಮ]

ವೀರ ಯೋಧ ಬದುಕಿ ಬರಲಿ ಎಂಬ ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಲಿಲ್ಲ. ಹನುಮಂತಪ್ಪ ಕೊಪ್ಪದ ಅವರು ಗುರುವಾರ ಬೆಳಗ್ಗೆ 11.45ಕ್ಕೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾದರು. ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ತರಲಾಯಿತು. [Live : ನೆಹರು ಮೈದಾನ ತಲುಪಿದ ಹನುಮಂತಪ್ಪ ಪಾರ್ಥಿವ ಶರೀರ]

ಗುರುವಾರ ರಾತ್ರಿ 10.20ರ ಸುಮಾರಿಗೆ ಹನುಮಂತಪ್ಪ ಕೊಪ್ಪದ ಪಾರ್ಥಿವ ಶರೀರ ಹೊತ್ತ ವಾಯುಪಡೆಯ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣ ತಲುಪಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಪಾರ್ಥಿವ ಶರೀರವನ್ನು ಬರಮಾಡಿಕೊಂಡು, ಅಂತಿಮ ನಮನ ಸಲ್ಲಿಸಿದರು. [ಹನುಮಂತಪ್ಪನ ಸ್ಮರಣೆಯಲ್ಲಿ ಸಿಯಾಚಿನ್ ಮಿಲಿಟರಿ ಮುಕ್ತವಾಗಲಿ]

ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಹನುಮಂತಪ್ಪ ಅವರ ಹುಟ್ಟೂರು ಕುಂದಗೋಳ ತಾಲ್ಲೂಕಿನ ಬೆಟದೂರಿನ ಗ್ರಾಮ ಪಂಚಾಯಿತಿ ಕಚೇರಿ ಪಕ್ಕದಲ್ಲಿಯೇ ಇರುವ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ....

ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಲಿಲ್ಲ

ವೀರ ಯೋಧ ಬದುಕಿ ಬರಲಿ ಎಂಬ ಕೋಟ್ಯಾಂತರ ಜನರ ಪ್ರಾರ್ಥನೆ ಫಲಿಸಲಿಲ್ಲ. ಹನುಮಂತಪ್ಪ ಕೊಪ್ಪದ ಅವರು ಗುರುವಾರ ಬೆಳಗ್ಗೆ 11.45ಕ್ಕೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾದರು. ದೆಹಲಿಯಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಿದ ಬಳಿಕ ಪಾರ್ಥಿವ ಶರೀರವನ್ನು ಹುಬ್ಬಳ್ಳಿಗೆ ತರಲಾಯಿತು.

ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ

ಹನುಮಂತಪ್ಪ ಕೊಪ್ಪದ ಅವರ ಪಾರ್ಥಿವ ಶರೀರವನ್ನು ಹೊತ್ತ ವಾಯುಪಡೆಯ ವಿಶೇಷ ವಿಮಾನ ಗುರುವಾರ ರಾತ್ರಿ 10.20ರ ಸುಮಾರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿಗಳು

ಹುಬ್ಬಳ್ಳಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಟ್ಟದೂರಿನಲ್ಲಿ ಸ್ಮಾರಕ ನಿರ್ಮಾಣ, ಯೋಧನ ಕುಟುಂಬಕ್ಕೆ 25 ಲಕ್ಷ ನಗದು ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿ, ಬೆಟ್ಟದೂರಿನಲ್ಲಿ ನಾಲ್ಕು ಎಕರೆ ಜಮೀನು, ಮತ್ತು ಹುಬ್ಬಳ್ಳಿಯಲ್ಲಿ ಒಂದು ನಿವೇಶನ ನೀಡುವುದಾಗಿ ತಿಳಿಸಿದರು.

ಅಂತಿಮ ನಮನ ಸಲ್ಲಿಸಿದ ಸಚಿವರು

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ, ಸಚಿವ ಎಚ್.ಕೆ.ಪಾಟೀಲ್ ಮುಂತಾದವರು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ಅಂತಿಮ ನಮನ ಸಲ್ಲಿಸಿದ ಶೆಟ್ಟರ್, ಜೋಶಿ

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು.

ನೂರಾರು ಜನರಿಂದ ಅಂತಿಮ ನಮನ

ಹನುಮಂತಪ್ಪ ಕೊಪ್ಪದ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ನೂರಾರು ಜನರು ಬರಮಾಡಿಕೊಂಡು, ಅಂತಿಮ ನಮನ ಸಲ್ಲಿಸಿದರು.

ಕಿಮ್ಸ್ ಆಸ್ಪತ್ರೆಗೆ ಪಾರ್ಥಿವ ಶರೀರ

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹನುಮಂತಪ್ಪ ಕೊಪ್ಪದ ಅವರ ಪಾರ್ಥಿವ ಶರೀರವನ್ನು ಕಿಮ್ಸ್ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಯಿತು.

English summary
The body of Lance Naik Hanamanthappa Koppad, who passed away after battling for life since his miraculous survival in Siachen, was brought to Hubballi on Thursday night. Karnataka Chief Minister Siddaramaiah along with his Cabinet colleagues received the body at the airport.
Please Wait while comments are loading...