'ಕಲ್ಪಾಮೃತ' ತೆಂಗು ಉತ್ಪನ್ನ ಮಾರಾಟ ವ್ಯವಸ್ಥೆಗೆ ಹೊಸ ಹೆಜ್ಜೆ
ಹಾಸನ, ಆಗಸ್ಟ್ 30 : ಮಹಾಮಸ್ತಕಾಭಿಷೇಕದಲ್ಲಿ ತೆಂಗಿನ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಎಳನೀರು ಮತ್ತು ತೆಂಗಿನ ಉತ್ಪನ್ನಗಳ ವ್ಯಾಪಾರಿ ಮಳಿಗೆಗಳಿಗೆ ವಿನ್ಯಾಸವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಇದಕ್ಕೆ 'ಕಲ್ಪಾಮೃತ' ಎಂದು ಹೆಸರಿಡಲು ನಿರ್ಧರಿಸಲಾಗಿದೆ.
ತೆಂಗು ಉತ್ಪನ್ನಗಳ ಮಾರಾಟಕ್ಕೆ ಹೊಸ ರೂಪ ಕೊಡಲು ಹಾಸನ ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದೆ. ಈ ಮೂಲಕ ರೈತರಿಗೆ ನೆರವಾಗಲು ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ನಾರು ಅಭಿವೃದ್ಧಿ ಉತ್ಪನ್ನ ಸಹಕಾರಿ ಮಂಡಳಿ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ತೆಂಗು ಉತ್ಪಾದಕರ ಸಹಕಾರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.

ಹಾಸನ ಜಿಲ್ಲೆಯಲ್ಲಿ ವಿನೂತನ ತೆಂಗು ಉತ್ಪನ್ನಗಳ ಮಾರಾಟ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿಯವರು ಆಸಕ್ತಿ ವಹಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಹಾಗೂ ತೆಂಗು ಬೆಳೆಗಾರರ ಪ್ರತಿನಿಧಿಗಳ ಸಭೆ ನಡೆಸಿರುವ ಅವರು, ನಾರು ಅಭಿವೃದ್ಧಿ ಸಹಕಾರಿ ಮಂಡಳಿ ಸಿದ್ಧಪಡಿಸಿದ್ದ ಹೆಸರುಗಳನ್ನು ಪರಿಶೀಲಿಸಿ ಅಂತಿಮವಾಗಿ 'ಕಲ್ಪಾಮೃತ' ಎಂಬ ಹೆಸರನ್ನು ಆಯ್ಕೆ ಮಾಡಿದ್ದಾರೆ.
ಮಾರಾಟ ಮಳಿಗೆಗಳ ವಿನ್ಯಾಸದ ಬಗ್ಗೆ ಜಿಲ್ಲಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಇದನ್ನು ಇನ್ನಷ್ಟು ಉತ್ತಮಪಡಿಸಲು ಅವಕಾಶವಿದ್ದು ಹಳ್ಳಿಸೊಗಡು ಹೆಚ್ಚಾಗಿ ಕಾಣುವಂತೆ ವಿನ್ಯಾಸ ಸಿದ್ಧಪಡಿಸಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಎಳನೀರಿನ ವಹಿವಾಟಿಗೆ ಆಧ್ಯತೆ : ತೆಂಗು ಬೆಳೆಗಾರರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಕಲ್ಪಿಸಿ ಇಬ್ಬರಿಗೂ ಲಾಭವಾಗುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಮಧ್ಯವರ್ತಿಗಳ ಹಾವಳಿ ಇರದೆ ಮಾರಾಟ ಮಳಿಗೆಯೂ ಉಚಿತವಾಗಿ ದೊರೆಯುವುದರಿಂದ ರೈತರಿಗೆ ಹೆಚ್ಚಿನ ಆದಾಯ ದೊರೆಯುತ್ತದೆ.
ರೈತರೇ ಮಳಿಗೆ ನಿರ್ವಹಣೆ ಮಾಡುವುದರಿಂದ ಉತ್ತಮ ವಾತಾವರಣದಲ್ಲಿ ಎಳನೀರು ಸವಿಯಬಹುದಾಗಿದೆ. ಎಳನೀರು ವ್ಯಾಪಾರ ಮೊದಲ ಆಧ್ಯತೆಯಾದರೂ, ಕಲ್ಪಾಮೃತದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ನಾರಿನ ಉತ್ಪನ್ನಗಳು, ತೆಂಗಿನ ತಿನಿಸುಗಳನ್ನು ಪ್ರದರ್ಶಿಸಿ ಮಾರಾಟಕ್ಕಿಡಲು ನಿರ್ಧರಿಸಲಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications