ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ.17 ರಿಂದ ಎಚ್.ಡಿ.ಕುಮಾರಸ್ವಾಮಿ ಉತ್ತರ ಕರ್ನಾಟಕ ಪರ್ವ ಆರಂಭ

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಮನೆ ಮಾಡಿರುವ ಕುಮಾರಸ್ವಾಮಿ ಅವರು ನ.17 ರಿಂದ 20 ರವರೆಗೆ ಧಾರವಾಡ-ಹುಬ್ಬಳ್ಳಿ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ನವೆಂಬರ್, 17 : ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮನೆ ಮಾಡುವುದರೊಂದಿಗೆ ತಮ್ಮ ಉತ್ತರ ಕರ್ನಾಟಕದ ಹೊಸ ಪರ್ವವನ್ನು ಆರಂಭಿಸಲಿದ್ದಾರೆ. ಗುರುವಾರ(ನ.17) ರಿಂದ ನ.20 ರ ವರೆಗೆ ಧಾರವಾಡ-ಹುಬ್ಬಳ್ಳಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಪ್ರವಾಸ ಕೈಗೊಂಡಿದ್ದಾರೆ.

ಮೊದಲು ಧಾರವಾಡ-ಹುಬ್ಬಳ್ಳಿ ಜಿಲ್ಲೆಯ ಹಲವು ಬರ ಪ್ರದೇಶಗಳಿಗೆ ಭೇಟಿ ನೀಡಿ ಹಾಗೂ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ರೈತರೊಂದಿಗೆ ಸಂವಾದಗಳನ್ನು ನಡೆಸಲಿದ್ದಾರೆ. [ಹುಬ್ಬಳ್ಳಿಯಲ್ಲಿ ಕುಮಾರಸ್ವಾಮಿ 2ನೇ ಮನೆ ಮಾಡ್ತಿರೋದು ಯಾಕೆ?]

Ex Chief Minister HD Kumarswamy to tour Dharwad-Hubballi district

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಈಗಾಗಲೇ ಮನೆ ಗೃಹ ಪ್ರವೇಶಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದ್ದು. ನ18 ರಂದು ಗೃಹ ಪ್ರವೇಶ ಮಾಡಲಿದ್ದಾರೆ. [ಕುಮಾರಣ್ಣನ ಹುಬ್ಬಳ್ಳಿ ಮನೆಯ ಅಂತರಂಗ-ಬಹಿರಂಗ]

ಇನ್ನೊಂದು ಕಡೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ಧ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗಿಳಿಯಬಹುದು ಎಂಬ ಸುದ್ದಿಗಳು ಹರಿದಾಡುತ್ತಿವೆ. [ನವೆಂಬರ್ 18ಕ್ಕೆ ಎಚ್ ಡಿಕೆ ಹುಬ್ಬಳ್ಳಿ ಮನೆ ಗೃಹಪ್ರವೇಶ]

ಇನ್ನು ಉತ್ತರ ಕರ್ನಾಟಕದ ಹಲವಾರು ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೊಂದಿಗೂ ಚೆನ್ನಾಗಿಯೇ ಇದ್ದೇನೆ. ಅವರೆಲ್ಲರೂ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಸೇರುವ ನಿರ್ಧಾರ ತೆಗೆದುಕೊಳ್ಳುಲಿದ್ದಾರೆ ಎಂದು ಕುಮಾರಸ್ವಾಮಿ ಈಗಾಗಲೇ ಬೆಳಗಾವಿಯಲ್ಲಿ ಹೇಳಿಕೆ ನೀಡಿರುವುದು ಇನ್ನಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಒಟ್ಟಾರೆ ಉತ್ತರ ಕರ್ನಾಟಕದ ಮೇಲೆ ಹೆಚ್ಚು ಕಾಳಜಿ ತೋರಿಸುತ್ತಿರುವ ಕುಮಾರಸ್ವಾಮಿ ಅವರ ನಡೆ ಮುಂದೆ ಯಾವ ರೀತಿಯಲ್ಲಿ ವರದಾನವಾಗಲಿದೆ ಎಂಬುವುದು ಕಾದು ನೋಡಬೇಕು.

English summary
Ex Chief Minister HD Kumarswamy to tour Dharwad-Hubballi district drought-hit villages from November 17 to 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X