ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ ತಿಂಗಳಿಂದ ಜೆಡಿಎಸ್ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ: ಎಚ್ ಡಿಡಿ

ಮುಂದಿನ ತಿಂಗಳು ಜೆಡಿಎಸ್ ನಿಂದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರು. 2018ರ ವಿಧಾನಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆ.

|
Google Oneindia Kannada News

ಹುಬ್ಬಳ್ಳಿ, ಆಗಸ್ಟ್ 23: 2018ರ ವಿಧಾನಸಭಾ ಚುನಾವಣೆಗಾಗಿ ಮುಂದಿನ ತಿಂಗಳಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದ್ದಾರೆ. ಜೆಡಿಎಸ್ ಬಲವರ್ಧನೆ ಹಿನ್ನೆಲೆಯಲ್ಲಿ ಇಲ್ಲಿಗೆ ಬುಧವಾರ ಆಗಮಿಸಿದ್ದ ಅವರು, ಸುದ್ದಿಗಾರರೊಂದಿಗೆ ಮಾತನಾಡುವಾಗ ಈ ವಿಚಾರ ತಿಳಿಸಿದರು.

ಆಯ್ಕೆ ಪ್ರಕ್ರಿಯೆ ಮುಗಿದ ಕೂಡಲೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂಬ ಬಗ್ಗೆ ಕೆಲವಾರು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಅವು ಸುಳ್ಳು. ಹಾಗೆಂದು ನಾನು ಎಲ್ಲಿಯೂ ಹೇಳಿಲ್ಲ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗ ಒಂದು ಪಟ್ಟಿಯನ್ನು ಕೊಟ್ಟಿದ್ದಾರೆ. ಅದನ್ನು ಕೂಲಂಕಷ ಅಧ್ಯಯನ ಮಾಡಿ, ಆ ಪಟ್ಟಿಯನ್ನು ಪರಿಷ್ಕರಿಸುತ್ತೇವೆ. ಅದಕ್ಕಾಗಿಯೇ ಪ್ರತ್ಯೇಕ ಪ್ರಕ್ರಿಯೆ ನಡೆಯುತ್ತದೆ. ಅಂತಿಮ ಪಟ್ಟಿ ಸಿದ್ಧವಾದ ನಂತರ ಅದನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

JDS will prepare election candidates list in September: HD Devegowda

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ''ನಾನು ಈಗಲೇ ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವುದಿಲ್ಲ. ಇಷ್ಟೇ ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುತ್ತದೆ ಎಂದು ಹೇಳಲು ಹೋಗುವುದಿಲ್ಲ. ಪಕ್ಷ ಸಂಘಟನೆಗೆ ಮಾತ್ರ ನಮ್ಮದು ಮೊದಲ ಪ್ರಾಶಸ್ತ್ಯ'' ಎಂದು ಅವರು ತಿಳಿಸಿದರು.

ಇನ್ನು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ''ಮಹದಾಯಿ ಹಾಗೂ ಕಳಸಾ ಬಂಡೂರಿ ಸಮಸ್ಯೆಗಳನ್ನು ಬಗೆಹರಿಸುವುದು ಪ್ರಧಾನಿಗೆ ದೊಡ್ಡ ವಿಚಾರವೇನಲ್ಲ. ಆದರೂ, ರಾಜಕೀಯ ಕಾರಣಗಳಿಗಾಗಿ ಇದು ವಿಳಂಬವಾಗುತ್ತಿದೆ'' ಎಂದು ಅವರು ತಿಳಿಸಿದರು.

English summary
Former Prime Minster HD Devegowda told that, JDS will prepare a list of candidates for Karnataka Assembly elections 2018. The list will be released at suitable time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X