ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ವಿವಿಗೂ ತಟ್ಟಿದ ಜೆಎನ್ಯೂ ಕಾಡ್ಗಿಚ್ಚು, ಘಟಿಕೋತ್ಸವ ಮುಂದೂಡಿಕೆ

ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಬರಬೇಕಿದ್ದ ಜೆಎನ್ಯು ಉಪ ಕುಲಪತಿ ಜಗದೀಶ್ ಕುಮಾರ್ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಘಟಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

By ಅನುಶಾ ರವಿ
|
Google Oneindia Kannada News

ಬೆಂಗಳೂರು, ಮಾರ್ಚ್ 2: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದವರೆಗೂ ಜೆನ್ಯೂ ಕಾಡ್ಗಿಚ್ಚು ಹಬ್ಬಿಕೊಂಡಿದೆ.

ಕರ್ನಾಟಕ ವಿಶ್ವವಿದ್ಯಾಲಯದ ಘಟಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಬರಬೇಕಿದ್ದ ಜೆಎನ್ಯು ಉಪ ಕುಲಪತಿ ಜಗದೀಶ್ ಕುಮಾರ್ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದಾರೆ. ಇದರಿಂದ ಇಂದು ನಡೆಯಬೇಕಾಗಿದ್ದ ಘಟಿಕೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.[ಹುಬ್ಬಳ್ಳಿಯಲ್ಲಿ ಎಸಿಬಿ ದಾಳಿ: 6 ಸಾವಿರ ಸೀರೆ, 7 ಲಕ್ಷ ರೂ ನಗದು ವಶ]

Karnatak university postpones convocation after JNU Vice-Chancellor cancels visit

ಅಂದುಕೊಂಡಂತೆ ನಡೆದಿದ್ದರೆ ಇಂದು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಬೇಕಾಗಿತ್ತು. ನೂರಾರು ವಿದ್ಯಾರ್ಥಿಗಳು ತಮ್ಮ ಪದವಿ ಪ್ರಮಾಣ ಪತ್ರ ಸ್ವೀಕಾರ ಮಾಡಬೇಕಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ದೆಹಲಿಯ ಜವಾಹರ್ ಲಾಲ್ ವಿಶ್ವವಿದ್ಯಾಲಯದ ಉಪ ಕುಲಪತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗುವುದಾಗಿ ಹೇಳಿದ್ದಾರೆ. ಇದರಿಂದ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ.[ಮಾ.2ರಿಂದ ಯಶವಂತಪುರದಿಂದ ಪಂಢರಪುರಕ್ಕೆ ವಿಶೇಷ ರೈಲು]

ಮೂಲಗಳ ಪ್ರಕಾರ ಉಪ ಕುಲಪತಿ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯ ಸಂಘಟನೆಗಳು ಮುಂದಾಗಿದ್ದವು. ಗುಪ್ತಚರ ಇಲಾಖೆಯೇ ಈ ಮಾಹಿತಿ ನೀಡಿತ್ತು. ಹೀಗಾಗಿ ಕೊನೆಯ ಕ್ಷಣದಲ್ಲಿ ಧಾರವಾಡಕ್ಕೆ ಬರುವ ನಿರ್ಧಾರವನ್ನು ಜಗದೀಶ್ ಕುಮಾರ್ ರದ್ದು ಪಡಿಸಿದ್ದಾರೆ.

ರಮ್ಜಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆಯುತ್ತಿರುವ ಸಂಘರ್ಷ ಇಲ್ಲೂ ಪುನಾರವರ್ತನೆಯಾಗುವ ಸಾಧ್ಯತೆಗಳಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂದು ಯೋಚಿಸಿ ಜಗದೀಶ್ ಕುಮಾರ್ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

English summary
Karnatak university in Dharwad was forced to postpone its convocation scheduled on Thursday after its guest of honor and JNU's Vice chancellor Mamidala Jagadesh Kumar cancelled his visit. Threat perception was cited as the reason for the cancellation of Jawaharlal Nehru University's VC's visit to Dharwad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X