ಹುಬ್ಬಳ್ಳಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಎಂ ಕಲಬುರ್ಗಿ ಹತ್ಯೆ, ಶೀಘ್ರದಲ್ಲೇ ಆರೋಪಿಗಳ ಬಂಧನ : ಸಿಎಂ

|
Google Oneindia Kannada News

ಹುಬ್ಬಳ್ಳಿ, ಆಗಸ್ಟ್ 29 : 'ಸಂಶೋಧಕ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 2015ರ ಆಗಸ್ಟ್ 30ರಂದು ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾತನಾಡಿದ ಸಿದ್ದರಾಮಯ್ಯ ಅವರು, 'ಸಂಶೋಧಕ ಎಂ.ಎಂ. ಕಲಬುರ್ಗಿ ಅವರ ಹತ್ಯೆಯಾಗಿ ನಾಳೆಗೆ (ಆ.30)ಕ್ಕೆ ಒಂದು ವರ್ಷ. ಇನ್ನೂ ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ, ಸಿಐಡಿ ಹಾಗೂ ಸಿಬಿಐ ಅಧಿಕಾರಗಳು ತನಿಖೆ ನಡೆಸುತ್ತಿದ್ದಾರೆ' ಎಂದರು. [ಕಲ್ಲುಬಂಡೆಯಂತೆ ಕುಳಿತಿರುವ ಕಲಬುರ್ಗಿ ಹತ್ಯೆ ತನಿಖೆ]

mm kalburgi

'ಎಂ.ಎಂ.ಕಲಬುರ್ಗಿ ಅವರ ಹೆಸರಲ್ಲಿ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅದರ ಅನುಷ್ಠಾನ ಯಾವ ಹಂತದಲ್ಲಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು' ಎಂದು ಹೇಳಿದರು.[ಕಲಬುರ್ಗಿ ಹತ್ಯೆ ತನಿಖೆಗೆ ವಿಶೇಷ ತಂಡ ರಚನೆ]

2015ರ ಆಗಸ್ಟ್ 30ರಂದು ಧಾರವಾಡದ ಕಲ್ಯಾಣ ನಗರದ ನಿವಾಸದಲ್ಲಿ ಎಂ.ಎಂ.ಕಲಬುರ್ಗಿ ಅವರ ಹತ್ಯೆ ನಡೆದಿತ್ತು. ಮೊದಲು ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು.[ಕಲಬುರ್ಗಿ ಹತ್ಯೆ ಕೇಸ್ : ಸಿಐಡಿ ವರದಿಯಲ್ಲೇನಿದೆ?]

ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯ ತನಿಖೆ ನಡೆಸುತ್ತಿರುವ ಸಿಬಿಐ ಡಾ.ವಿರೇಂದ್ರ ತಾವಡೆ ಎಂಬುವವರನ್ನು ಬಂಧಿಸಿದೆ. ಕಲಬುರ್ಗಿ, ದಾಬೋಲ್ಕರ್ ಮತ್ತು ಗೋವಿಂದ ಪನ್ಸಾರೆ ಅವರನ್ನು ಒಂದೇ ಸಂಘಟನೆಯವರು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ.

English summary
Karnataka Chief Minister Siddaramaiah said Professor M.M.Kalburgi murder case accused will be arrested soon. Kalburgi was shot dead in the morning of 30 August 2015 at his residence Dharwad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X