ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

20 ರು.ನೀರಿನ ಬಾಟಲಿಗೆ 50ರು. ಪಡೆದ ಐನಾಕ್ಸ್ ಮಲ್ಟಿಪ್ಲೆಕ್ಸ್ ಗೆ 5 ಸಾವಿರ ದಂಡ

|
Google Oneindia Kannada News

ಹೈದರಾಬಾದ್, ಏಪ್ರಿಲ್ 23 : ನೀರಿನ ಬಾಟಲಿಗೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪೀಕುತ್ತಿದ್ದ ಇಲ್ಲಿನ ಬಂಜಾರಾ ಹಿಲ್ಸ್ ನ ಜಿವಿಕೆ ಮಾಲ್ ನಲ್ಲಿರುವ ಐನಾಕ್ಸ್ ಮಲ್ಟಿಪ್ಲೆಕ್ಸ್ ಗೆ ಹೈದರಾಬಾದ್ ಗ್ರಾಹಕರ ವೇದಿಕೆ 5 ಸಾವಿರ ರು. ದಂಡ ವಿಧಿಸಿದೆ.

20 ರು. ನೀರಿನ ಬಾಟಲಿಗೆ 50 ರು ಪಡೆದುಕೊಂಡಿದ್ದಾರೆ ಎಂದು ವಿಜಯ್ ಗೋಪಾಲ್ ಎಂಬವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಬಳಿಕ ಮಲ್ಟಿಪ್ಲೆಕ್ಸ್ ಗೆ 5 ಸಾವಿರ ರು. ದಂಡ ಹಾಗೂ ದೂರುದಾರರಿಗೆ 1 ಸಾವಿರ ರು. ಪರಿಹಾರ ನೀಡಬೇಕೆಂದು ಆದೇಶಿಸಿದೆ.

Hyderabad INOX fined Rs. 5000 for charging Rs 50 for a water bottle

ನನ್ನ ಸ್ವಂತ ಬಾಟಲಿಯಲ್ಲಿ ನೀರು ತೆಗೆದುಕೊಂಡು ಹೋಗಲು ಅವಕಾಶ ನೀಡಲಿಲ್ಲ. ಹಾಗೆ ಒಂದು ನೀರಿನ ಬಾಟಲಿಗೆ ಮಲ್ಟಿಪ್ಲೆಕ್ಸ್ ನೊಳಗೆ 50 ರು. ತೆಗೆದುಕೊಂಡುರು. ಇದೇ ಬಾಟಲಿಗೆ ಹೊರಗಡೆ 20 ರು. ಎಂಆರ್ ಪಿ ಇದೆ ಎಂದು ವಿಜಯ್ ಗ್ರಾಹಕರ ವೇದಿಕೆಗೆ ತಿಳಿಸಿದ್ದರು.

ಒಂದೇ ಬಾಟಲಿಗೆ ಎರಡು ಎಂಆರ್ ಪಿ ಇರಬಾರದು ಎಂಬುದನ್ನು ಸ್ಪಷ್ಟಪಡಿಸಿರುವ ಗ್ರಾಹಕರ ವೇದಿಕೆ, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಸ್ವೀಕರಿಸದಂತೆ ಐನಾಕ್ಸ್ ಗೆ ಸೂಚಿಸಿದೆ. ಅಲ್ಲದೆ ಗ್ರಾಹಕರಿಗೆ ಉಚಿತ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಥಿಯೇಟರ್ ನಿರ್ವಾಹಕರಿಗೆ ಹೇಳಿದೆ.

ಕಳೆದ ಜೂನ್‍ ನಲ್ಲಿ ವಿಜಯ್ ಮಲ್ಟಿಪ್ಲೆಕ್ಸ್ ಗೆ ಭೇಟಿ ನೀಡಿದ್ದು , ಮಾಲ್ ಗಳು ಗ್ರಾಹಕರಿಂದ ಹೆಚ್ಚಿನ ಹಣ ಪಡೆದು ಜನರನ್ನು ಲೂಟಿ ಮಾಡುತ್ತಿವೆ ಎಂದು ಆರೋಪಿಸಿದ್ದರು.

English summary
A Hyderabad Consumer Forum has ruled that cinema theatres cannot charge more than the Maximum Retail Price (MRP) on water bottles, and asked INOX multiplex to pay up Rs 5,000, along with another Rs 1,000 to an activist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X