ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರ್ಖಂಡ್‌ನಲ್ಲಿ 12 ಮಾವೋವಾದಿಗಳ ಹತ್ಯೆ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಜೂ. 09 : ಜಾರ್ಖಂಡ್‌ನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳವಾರ ಮುಂಜಾನೆ 2.30ರ ಸುಮಾರಿಗೆ ಪನಾಮು ಜಿಲ್ಲೆಯ ಸತ್‌ ಬರ್ವ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಗುಂಡಿನ ಕಾಳಗ ನಡೆದಿದೆ. ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ನಕ್ಸಲರ ಮೇಳೆ ಗುಂಡಿನ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ 12 ಮಾವೋವಾದಿಗಳು ಮೃತಪಟ್ಟಿದ್ದಾರೆ. [ಉಲ್ಫಾ ಉಗ್ರರಿಂದ 20 ಯೋಧರ ಭೀಕರ ಹತ್ಯೆ]

police

ಮಾವೋವಾದಿಗಳು ಶಸ್ತ್ರಾಸ್ತ್ರಗಳೊಂದಿಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಹೊರಟಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ. ಗುಂಡಿನ ದಾಳಿಯ ನಂತರ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. [ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಬೆಳಗಾವಿ ಯೋಧ]

ನಕ್ಸಲರನ್ನು ಸುತ್ತುವರೆದ ಪೊಲೀಸ್ ಪಡೆ ಶರಣಾಗುವಂತೆ ಅವರಿಗೆ ಸೂಚನೆ ನೀಡಿತ್ತು. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಅವರು ಗುಂಡಿನ ದಾಳಿ ನಡೆಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ ಎಂದು ಜಾರ್ಖಂಡ್ ಪೊಲೀಸರು ಮಾಹಿತಿ ನೀಡಿದ್ದಾರೆ.

naxal

ನಕ್ಸಲರ ಪ್ರಾಬಲ್ಯವಿದೆ : ಜಾರ್ಖಂಡ್‌ನಲ್ಲಿ ನಕ್ಸಲರ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಪನಾಮು ಸಹ ಒಂದು. ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ನಕ್ಸಲರ ಟೆಂಟ್‌ಗಳಿವೆ. ಕೆಲವು ದಿನಗಳ ಹಿಂದೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ನಕ್ಸಲರು ಬೃಹತ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡಿದ್ದರು. [ಪಿಟಿಐ ಚಿತ್ರ]

English summary
In a pre-dawn operation the police and the CRPF shot down 12 suspected naxalites at the Palamau district in Jharkhand on 2.30 am on Tuesday, June 9, 2015.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X