ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್‌ನಲ್ಲಿ ಬಿಹಾರ ವಿಧಾನಸಭೆ ಚುನಾವಣೆ?

By ವಿಕಾಸ್ ನಂಜಪ್ಪ
|
Google Oneindia Kannada News

ಪಾಟ್ನ, ಆಗಸ್ಟ್ 13 : ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಅಕ್ಟೋಬರ್‌ ಮಧ್ಯಭಾಗದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆಯ ಸಿದ್ಧತೆಗಳ ಪರಿಶೀಲನೆಗಾಗಿ ಅಧಿಕಾರಿಗಳನ್ನು ಬಿಹಾರಕ್ಕೆ ಕಳುಹಿಸಿದೆ.

ವಿಧಾನಸಭೆ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಸದ್ಯದ ಮಾಹಿತಿಯಂತೆ ನಾಲ್ಕು ಹಂತಗಳಲ್ಲಿ ಮತದಾನ ನಡೆಯಲಿದೆ. [ಬಗೆಹರಿದ ಬಿಹಾರ ಮೈತ್ರಿ ಕೂಟದ ಸೀಟು ಹಂಚಿಕೆ ಕಸರತ್ತು]

bihar

ಬಿಹಾರ ವಿಧಾನಸಭೆ ಚುನಾವಣೆ ನಡೆಸಲು ನವೆಂಬರ್ 29ರ ತನಕ ಕಾಲಾವಕಾಶವಿದೆ. ಅಷ್ಟರೊಳಗೆ ಚುನಾವಣಾ ಪ್ರಕ್ರಿಯೆಗಳು ಮುಗಿದು ನೂತನ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ. ಚುನಾವಣಾ ಆಯೋಗ ಬಿಹಾರಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿದ್ದು, ಸಿದ್ಧತೆ, ಭದ್ರತೆ ಮುಂತಾದ ವಿಚಾರಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. [ಬಿಹಾರದ ಅದೃಷ್ಟವನ್ನು ಬಿಜೆಪಿ ಬದಲಾಯಿಸಲಿದೆ : ಮೋದಿ]

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಆರ್‌ಜೆಡಿ ಮತ್ತು ಜೆಡಿಯು ಮೈತ್ರಿ ಮಾಡಿಕೊಂಡಿವೆ. ಬಿಹಾರ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 243. ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) 100, ಸಂಯುಕ್ತ ಜನತಾ ದಳ (ಜೆಡಿಯು) 100 ಹಾಗೂ ಕಾಂಗ್ರೆಸ್‌ ಪಕ್ಷ 40 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.

ಬುಧವಾರ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ಮಖ್ಯಸ್ಥ ನಿತೀಶ್ ಕುಮಾರ್ ಅವರು ಆಗಸ್ಟ್‌ 30ರಂದು ಗಾಂಧಿ ಮೈದಾನದಲ್ಲಿ 'ಬಿಹಾರ್‌ ಸ್ವಾಭಿಮಾನ ಸಮಾವೇಶ' ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

English summary
The Bihar elections may get underway from mid-October and could go on for a month in four phases. The Election Commission of India which has sent its officials to Bihar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X