ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಟಿ ರಿಟರ್ನ್ಸ್, ಪಾನ್ ಕಾರ್ಡ್ ಪಡೆಯಲು ಆಧಾರ್ ಕಡ್ಡಾಯ

|
Google Oneindia Kannada News

ನವದೆಹಲಿ, ಮಾರ್ಚ್. 22 : ಪಾನ್ ಕಾರ್ಡ್ ಪಡೆಯಲು ಮತ್ತು ಆದಾಯ ತೆರಿಗೆ ಲೆಕ್ಕಪತ್ರ(ಐಟಿ ರಿಟರ್ನ್ಸ್) ಸಲ್ಲಿಸುವ ವೇಳೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.

ಸಂಸತ್ತಿನಲ್ಲಿ ಚರ್ಚೆಯಾಗುತ್ತಿರುವ ಹಣಕಾಸು ಮಸೂದೆಯಲ್ಲಿ ತಿದ್ದುಪಡಿ ತಂದು ಆಧಾರ್ ಕಡ್ಡಾಯ ಅಂಶವನ್ನು ಕೇಂದ್ರ ಸರ್ಕಾರ ಸೇರಿಸಿದೆ. ಜುಲೈ 1ರಿಂದ ಈ ನಿಯಮ ಜಾರಿಗೆ ಬರಲಿದ್ದು, ಹಣಕಾಸು ಸಚಿವ ಅರುಣ್ ಜೇಟ್ಲಿ ಹಣಕಾಸು ಮಸೂದೆಯ ಬಗ್ಗೆ ಬುಧವಾರ ಸಂಸತ್ತಿನಲ್ಲಿ ಮಾತನಾಡಲಿದ್ದಾರೆ.

Aadhaar mandatory for filing I-T returns, applying for PAN card

ಕಳೆದ ಕೆಲ ವರ್ಷಗಳ ಐಟಿಆರ್ ಸಲ್ಲಿಕೆಯ ಆಧಾರ್ ಐಚ್ಚಿಕವಾಗಿತ್ತು. ಭಾರತದಲ್ಲಿ ವಿದೇಶಿ ಪ್ರಜೆಗಳು ತೆರಿಗೆ ಪಾವತಿಸುತ್ತಿರುವುದರಿಂದ ಈಗ ಕೆಲ ಪ್ರಶ್ನೆಗಳು ಎದ್ದಿದ್ದು ಈ ಸಮಸ್ಯೆಗೆ ಪರಿಹಾರ ಏನು ಎನ್ನುವ ಪ್ರಶ್ನೆಗೆ ಸರ್ಕಾರ ಉತ್ತರಿಸಬೇಕಿದೆ.

ಕೇಂದ್ರ ಸರ್ಕಾರ ಈಗ ಎಲ್ಲ ಸೇವೆಗಳಿಗೂ ಆಧಾರ್ ಕಡ್ಡಾಯಗೊಳಿಸುತ್ತಿದ್ದು, ಕೆಲ ದಿನಗಳ ಹಿಂದೆ ಆನ್ಲೈನ್ ರೈಲ್ವೆ ಟಿಕೆಟ್ ಬುಕ್ಕಿಂಗಿಗೆ ಆಧಾರ ಕಾರ್ಡ್ ನ್ನು ಕಡ್ಡಾಯಗೊಳಿಸಿತ್ತು.

English summary
In a move that will have a deep-reaching impact, the government on Tuesday proposed to make Aadhaar card mandatory for filing income tax return and applying for permanent account number (PAN), which will come into effect from July 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X