ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮೇಶ್ವರಂನಲ್ಲಿ ಗುರುವಾರ ಅಬ್ದುಲ್ ಕಲಾಂ ಅಂತ್ಯಕ್ರಿಯೆ

|
Google Oneindia Kannada News

ಬೆಂಗಳೂರು, ಜುಲೈ 28 : ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆ ರಾಮೇಶ್ವರಂನಲ್ಲಿ ಗುರುವಾರ ನಡೆಯಲಿದೆ. ನವದೆಹಲಿಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಲಾಂ ಕುಟುಂಬದವರ ಇಚ್ಛೆಯಂತೆ ಅವರ ಹುಟ್ಟೂರು ತಮಿಳುನಾಡಿನ ರಾಮೇಶ್ವರಂನಲ್ಲಿ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. [ಡಾ.ಕಲಾಂ ಸ್ಫೂರ್ತಿದಾಯಕ ಹೇಳಿಕೆಗಳು]

tamil nadu

ಶಿಲ್ಲಾಂಗ್‌ನಿಂದ ವಿಶೇಷ ವಿಮಾನದ ಮೂಲಕ ಅಬ್ದುಲ್ ಕಲಾಂ ಅವರ ಮೃತದೇಹವನ್ನು ಮಂಗಳವಾರ ಬೆಳಗ್ಗೆ ಗುವಾಹಟಿಗೆ ತರಲಾಯಿತು. ಅಲ್ಲಿಂದ ವಾಯುಪಡೆಯ ಸಿ-130ಜೆ ಸೂಪರ್‌ ಹರ್ಕ್ಯುಲೆಸ್‌ ವಿಮಾನದ ಮೂಲಕ ಅವರ ಮೃತಹೇಹವನ್ನು ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ತರಲಾಯಿತು. [ಅಬ್ದುಲ್ ಕಲಾಂ ಸಂಕ್ಷಿಪ್ತ ಪರಿಚಯ]

ಪಾಲಂ ವಿಮಾನ ನಿಲ್ದಾಣದಲ್ಲಿ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್ ಮತ್ತು ಸೇನಾ ಪಡೆಯ ಮೂವರು ಮುಖ್ಯಸ್ಥರು ಡಾ.ಕಲಾಂ ಅವರ ಪಾರ್ಥೀವ ಶರೀರವನ್ನು ಬರಮಾಡಿಕೊಂಡರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಂತಾದವರು ವಿಮಾನ ನಿಲ್ದಾಣದಲ್ಲಿ ಅಂತಿಮ ನಮನ ಸಲ್ಲಿಸಿದರು. [ಕಲಾಂ ಆಶಯದಂತೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಇಲ್ಲ]

ಇಂದು ಮಧ್ಯಾಹ್ನ 3 ಗಂಟೆಯ ತನಕ ಗಣ್ಯರು ಅಂತಿಮ ನಮನ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3ರಿಂದ ರಾತ್ರಿ 10ರವರೆಗೆ ದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಕಲಾಂ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಬೆಳಗ್ಗೆ 10.15ಕ್ಕೆ ರಾಮೇಶ್ವರಂನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

English summary
The Union Cabinet on Thuesday decided that the last rites of the former president APJ Abdul Kalam will be held at Rameswaram in Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X