ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಶೈಕ್ಷಣಿಕ ಅರ್ಹತೆ ಬಗ್ಗೆ ಟ್ವೀಟ್ : ಕೇಜ್ರಿವಾಲ್ ಗೆ ಅರೆಸ್ಟ್ ವಾರೆಂಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ಧ ಅಸ್ಸಾಂ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

|
Google Oneindia Kannada News

ನವದೆಹಲಿ, ಏಪ್ರಿಲ್ 11 : ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ವಿರುದ್ಧ ಅಸ್ಸಾಂ ಕೋರ್ಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಟ್ವೀಟ್ ಮಾಡಿದ್ದ ಆರೋಪದ ಮೇಲೆ ಕೇಜ್ರಿವಾಲ್ ವಿರುದ್ಧ ಸುರ್ಜೋ ರಂಗ್ ಫರ್ ಎಂಬವರು ಮಾನನಷ್ಟ ಮೊಕದ್ದಮೆ ದೂರು ದಾಖಲಿಸಿದ್ದರು.[ಪ್ರಧಾನಿ ಮೋದಿ ವಿದ್ಯಾರ್ಹತೆ: ಕೇಜ್ರಿವಾಲ್ ಸಿಡಿಸಿದ ಬಾಂಬ್]

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅಸ್ಸಾಂನ ದಿಪು ಚೀಫ್ ಜುಡಿಸಿಯಲ್ ಮ್ಯಾಜಿಸ್ಟೇಟ್ ಕೋರ್ಟ್ ಗೆ ಹಾಜರಾಗದ ಕಾರಣ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

Arrest warrant against Arvind Kejriwal for tweet over Modi’s education qualification

ಮೋದಿಜಿ 12ನೇ ಕ್ಲಾಸ್ ಪಾಸ್ ಮಾಡಿರೋದು. ಅನಂತರದ ಪದವಿಗಳೆಲ್ಲ ನಕಲಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಸುರ್ಜೋ ರಂಗ್ ಫರ್ ಎಂಬವರು ಕೇಜ್ರಿವಾಲ್ ವಿರುದ್ಧ ದಿಪು ಕೋರ್ಟ್‍ ನಲ್ಲಿ ದೂರು ದಾಖಲಿಸಿದ್ದರು.

ಇವರ ದೂರಿನನ್ವಯ ಕೇಜ್ರಿವಾಲ್ ವಿರುದ್ಧ ಐಪಿಸಿ ಸೆಕ್ಷನ್ 499, 500 ಹಾಗೂ 501ರ ಅಡಿ ಪ್ರಕರಣ ದಾಖಲಾಗಿದೆ. ಅಸ್ಸಾಂನ ದಿಪು ಚೀಫ್ ಜುಡಿಸಿಯಲ್ ಮ್ಯಾಜಿಸ್ಟೇಟ್ ಕೋರ್ಟ್ ಈ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸಮನ್ಸ್ ಜಾರಿ ಮಾಡಿತ್ತು.

ಆದರೆ, ಅವರು ಕೋರ್ಟ್‍ ಗೆ ಹಾಜರಾಗಿರಲಿಲ್ಲ. ಈ ಕಾರಣಕ್ಕೆ ಇದೀಗ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.

English summary
A court in Assam has issued an arrest warrant against Delhi chief minister Arvind Kejriwal after he failed to appear before it in a defamation case over his tweet on Prime Minister Narendra Modi’s education qualifications.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X