Jharkhand Election 2024: ಮಹತ್ವದ ಅಪ್ಡೇಟ್ ಕೊಟ್ಟ ಜಾರ್ಖಂಡ್ ಮುಖ್ಯ ಚುನಾವಣಾಧಿಕಾರಿ
Jharkhand Election 2024: ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳ ನಾಯಕರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ನೇತೃತ್ವದ ಚುನಾವಣಾ ಆಯೋಗದ ತಂಡವು ಚುನಾವಣೆಯ ಸಿದ್ಧತೆಯನ್ನು ಪರಿಶೀಲನೆ ಮಾಡಲು ಸೋಮವಾರ (ಸೆಪ್ಟೆಂಬರ್ 23) ಜಾರ್ಖಂಡ್‌ಗೆ ಆಗಮಿಸಿದೆ ಎಂದು ತಿಳಿದುಬಂದಿದೆ.
ಇನ್ನು ಎರಡು ದಿನಗಳ ಪ್ರವಾಸದಲ್ಲಿರುವ ತಂಡವು ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಾರಿ ಸಂಸ್ಥೆಗಳು, ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಇತರ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆ.ರವಿಕುಮಾರ್ ಹೇಳಿದ್ದಾರೆ.

ತಂಡವು ಮಂಗಳವಾರ (ಸೆಪ್ಟೆಂಬರ್ 24, 2024) ಜಿಲ್ಲಾ ಚುನಾವಣಾ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇನ್ಸ್‌ಪೆಕ್ಟರ್ ಜನರಲ್‌ಗಳು ಮತ್ತು ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್‌ಗಳನ್ನು ಭೇಟಿ ಮಾಡಲಿದೆ ಎಂದು ಹೇಳಿದರು. ಇನ್ನು ಸಭೆಯ ಸಮಯದಲ್ಲಿ ಚುನಾವಣಾ ಸಿದ್ಧತೆ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಇತರ ಚುನಾವಣಾ ಸಂಬಂಧಿತ ಸಮಸ್ಯೆಗಳನ್ನು ಪರಿಶೀಲಿಸಲಿದೆ ಎಂದು ಹೇಳಿದರು.
2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗದ ಮೂಲಗಳಿಂದ ತಿಳಿದುಬಂದಿದೆ.
ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದೇನು?: ಹರಿಯಾಣ & ಜಮ್ಮು ಕಾಶ್ಮೀರ ಎರಡು ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಪೈಕಿ ಈಗಾಗಲೇ ಜಮ್ಮು & ಕಾಶ್ಮೀರದಲ್ಲಿ ಮೊದಲ ಹಂತದ ಮತದಾನ ಮುಗಿದಿದೆ. ಇನ್ನು ಜಾರ್ಖಂಡ್‌ನಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಪ್ರಚಾರದ ರಂಗು ಜೊರಾಗಿದ್ದು, ಒಬ್ಬರ ಮೇಲೊಬ್ಬರು ಆರೋಪ-ಪ್ರತ್ಯಾರೋಪ ಮಾಡುವುದನ್ನು ಶುರು ಮಾಡಿದ್ದಾರೆ.
"ಜಾರ್ಖಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಯೊಂದಿಗೆ ಸ್ಪರ್ಧಿಸಬೇಕೇ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಬೇಕೇ ಎಂಬುದನ್ನು ಪಕ್ಷ ಶೀಘ್ರದಲ್ಲೇ ನಿರ್ಧರಿಸಲಿದೆ" ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವ ಮತ್ತು ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದರು.
ವಿಧಾನಸಭೆ ಚುನಾವಣಾ ಪೂರ್ವ ಸಿದ್ಧತೆ ಹಿನ್ನೆಲೆ ಅವರು ಸೋಮವಾರ ಬೆಳಗ್ಗೆ ರಾಂಚಿಗೆ ಭೇಟಿ ನೀಡಿದ್ದು, ಇಲ್ಲಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿದೆ ಮಾತನಾಡಿದರು. "ಪಕ್ಷ ತನ್ನ ಸಂಘಟನಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವತ್ತ ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಚುನಾವಣೆಗೆ ಸಿದ್ಧತೆ ನಡೆಸಿಕೊಳ್ಳಬೇಕಿದೆ. ಈ ಹಿನ್ನೆಲೆ ಪೂರ್ವಯೋಜನೆಯಂತೆ ಜಾರ್ಖಂಡ್‌ನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಿದೆ" ಎಂದು ಹೇಳಿದರು.
"ಇದೀಗ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ಕೆಲಸ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಏಕಾಂಕಿಯಾಗಿ ಸ್ಪರ್ಧಿಸಬೇಕೇ ಅಥವಾ ಎನ್‌ಡಿಎ ಮೈತ್ರಿಯೊಂದಿಗೆ ಸ್ಪರ್ಧಿಸಬೇಕೇ ಎಂಬುದರ ಕುರಿತು ಶೀಘ್ರದಲ್ಲೇ ನಿರ್ಧಾರ ಮಾಡಲಾಗುತ್ತದೆ" ಎಂದು ಹೇಳಿ ಗಮನ ಸೆಳೆದರು.
ಜಾರ್ಖಂಡ್‌ನಲ್ಲಿ ಇತರ ರಾಜ್ಯಗಳ ನಾಯಕರು ರಣಹದ್ದುಗಳಂತೆ ಸುಳಿದಾಡುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, "ಮುಖ್ಯಮಂತ್ರಿಗಳ ಇಂತಹ ಹೇಳಿಕೆಗೆ ಜನರು ಉತ್ತರ ನೀಡಲಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರ ತೀರ್ಪು ಎಲ್ಲವನ್ನೂ ಬಿಚ್ಚಿಡುತ್ತದೆ," ಎಂದು ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications