'ಸಿನಿಮಾ ಭಾಗವಾಗಿ ರಾಷ್ಟ್ರಗೀತೆ ಪ್ರಸಾರವಾದರೆ ಎದ್ದು ನಿಲ್ಲಬೇಕಿಲ್ಲ'

Written by:
Subscribe to Oneindia Kannada

ನವದೆಹಲಿ, ಫೆಬ್ರವರಿ. 14: ಸಿನಿಮಾದ ಭಾಗವಾಗಿ ಅಂದರೆ ಚಿತ್ರ ಪ್ರಸಾರವಾಗುತ್ತಿದ್ದ ಸಂದರ್ಭದ ಮಧ್ಯದಲ್ಲಿ ರಾಷ್ಟ್ರಗೀತೆ ಪ್ರಸಾರವಾದರೆ ಆ ವೇಳೆಯಲ್ಲಿ ಪ್ರೇಕ್ಷಕರು ಎದ್ದು ನಿಲ್ಲುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಆದರೆ, ಚಿತ್ರಮಂದಿರಗಳಲ್ಲಿ ಚಲನಚಿತ್ರ ಆರಂಭಕ್ಕೂ ಮುನ್ನ ಮೊಳಗುವ ರಾಷ್ಟ್ರಗೀತೆ ವೇಳೆ ಎಲ್ಲರೂ ಎದ್ದು ನಿಂತು ಗೌರವಿಸುವುದು ಕಡ್ಡಾಯವಾಗಿದೆ.

ಮಂಗಳವಾರ ಸುಪ್ರೀಂಕೋರ್ಟ್ ಈ ಕುರಿತು ತೀರ್ಪು ನೀಡಿದೆ. ಚಲನಚಿತ್ರದ ಭಾಗವಾಗಿ ರಾಷ್ಟ್ರಗೀತೆ ಪ್ರಸಾರವಾದರೆ ಜನರು ಎದ್ದುನಿಂತು ಗೌರವ ಸಲ್ಲಿಸಬೇಕಿಲ್ಲ ಎಂದು ಹೇಳಿದೆ. [ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ]

Audience need not stand when National Anthem is part of film: Supreme Court

ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್ ದೇಶಾದ್ಯಂತ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಕಡ್ಡಾಯವಾಗಿ ಪ್ರಸಾರ ಮಾಡಬೇಕು ಎಂದು ಆದೇಶ ನೀಡಿತ್ತು.

ರಾಷ್ಟ್ರಗೀತೆ ಪ್ರಸಾರವಾಗುವಾಗ ಪರದೆ ಮೇಲೆ ರಾಷ್ಟ್ರಧ್ವಜದ ಚಿತ್ರ ಪ್ರದರ್ಶನವಾಗಬೇಕು. ಈ ಸಂದರ್ಭದಲ್ಲಿ ಎಲ್ಲರೂ ಎದ್ದುನಿಂತು ಗೌರವ ಸಲ್ಲಿಸಬೇಕು ಎಂದು ಹೇಳಿತ್ತು.

English summary
The Supreme Court today clarified that the audience need not stand when the National Anthem is played as a part of the storyline of a film, newsreel or documentary.
Please Wait while comments are loading...