ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಲಿದ್ದಲು ಹಗರಣ: ಮಾಜಿ ಕಾರ್ಯದರ್ಶಿ ಗುಪ್ತಾ ಅಪರಾಧಿ

ಕಲ್ಲಿದ್ದಲು ಹಗರಣ ನಡೆದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಗುಪ್ತಾ, ನಿರ್ದೇಶಕ ಸಮಾರಿಯಾ, ಜಂಟಿ ಕಾರ್ಯದರ್ಶಿ ಕ್ರೋಫಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಮಾನಿಸಿದೆ.

|
Google Oneindia Kannada News

ನವದೆಹಲಿ, ಮೇ 19: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಕಲ್ಲಿದ್ದಲು ಸಚಿವಾಲಯದ ಮಾಜಿ ಕಾರ್ಯದರ್ಶಿ ಎಚ್‌.ಸಿ. ಗುಪ್ತಾ ಅವರು ಅಪರಾಧಿಯೆಂದು ಸಿಬಿಐ ವಿಶೇಷ ನ್ಯಾಯಾಲಯ ಘೋಷಿಸಿದೆ.

ಮಧ್ಯಪ್ರದೇಶದ ಥೆಸ್ಗೋರಾ- ಬಿ ರುದ್ರಪುರಿ ಕಲ್ಲಿದ್ದಲು ನಿಕ್ಷೇಪಗಳನ್ನು ಹಂಚಿಕೆ ಮಾಡುವ ವಿಚಾರದಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಇವರ ಮೇಲಿದೆ.

Coal scam case: Former coal secretary H C Gupta convicted

ಇದೇ ವೇಳೆ, ಹಗರಣ ನಡೆದ ಅವಧಿಯಲ್ಲಿ ಕಲ್ಲಿದ್ದಲು ಸಚಿವಾಲಯದ ಜಂಟಿ ಕಾರ್ಯದರ್ಶಿ ಕೆ.ಎಸ್. ಕ್ರೋಫಾ ಹಾಗೂ ಆಗಿನ ನಿರ್ದೇಶಕ ಕೆ.ಸಿ. ಸಮಾರಿಯಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಘೋಷಿಸಿದೆ. ಕೆಎಸ್‌ಎಸ್‌ಪಿಎಲ್ ಕಂಪೆನಿಯ ಎಂಡಿ ಪವನ್‌ಕುಮಾರ್ ಅಹ್ಲುವಾಲಿಯಾ ಅವರನ್ನು ತಪ್ಪಿತಸ್ಥರೆಂದು ನ್ಯಾಯಾಲಯ ಹೇಳಿದೆ.

ಮಧ್ಯಪ್ರದೇಶದ ಥೆಸ್‌ಗೊರಾ ಬಿ ಮತ್ತು ರುದ್ರಪುರಿ ಕಲ್ಲಿದ್ದಲು ಗಣಿಯನ್ನು ಕೆಎಸ್‌ಎಸ್‌ಪಿಎಲ್ ಕಂಪೆನಿಗೆ ಹಂಚಿಕೆ ಮಾಡಿದ ಪ್ರಕರಣ ಇದಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಮೇ 22ರಂದು ಪ್ರಕಟಿಸಲಿದೆ. ಪ್ರಕರಣಕ್ಕೆ ಸಂಬಂಧಿಸಿ, ಚಾರ್ಟಡ್ ಅಕೌಂಟೆಂಟ್ ಅಮಿತ್ ಗೋಯೆಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.‌

{promotion-urls}

English summary
A special Delhi court on Friday convicted former coal secretary H C Gupta in a coal scam case. Coal ministry’s then joint secretary K S Kropha and then director K C Samaria, besides others also convicted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X