ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್ ನಲ್ಲಿ ಈ ಐದು ರಾಜ್ಯಗಳಿಗೆ ಯಾವುದೇ ಘೋಷಣೆಯಿಲ್ಲ!

ವಿಧಾನಸಭೆ ಚುನಾವಣೆ ನಡೆಯಲಿರುವ ಪಂಜಾಬ್, ಉತ್ತರಾಖಾಂಡ, ಉತ್ತರ ಪ್ರದೇಶ, ಗೋವಾ, ಮಣಿಪುರ ರಾಜ್ಯಗಳ ಬಗ್ಗೆ ಯಾವುದೇ ಯೋಜನೆಗಳನ್ನು ಘೋಷಿಸದಿರುವಂತೆ ಚುನಾವಣಾ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಸೂಚನೆ.

|
Google Oneindia Kannada News

ನವದೆಹಲಿ, ಜನವರಿ 23: ಶೀಘ್ರದಲ್ಲೇ ವಿಧಾನ ಸಭೆ ಚುನಾವಣೆಗಳು ನಡೆಯುತ್ತಿರುವ ಐದು ರಾಜ್ಯಗಳಿಗೆ ಸಂಬಂಧಪಟ್ಟಂತೆ ಯಾವುದೇ ಯೋಜನೆಗಳನ್ನು ಫೆ. 1ರಂದು ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ಘೋಷಿಸದಿರುವಂತೆ ಚುನಾವಣಾ ಆಯೋಗವು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದಲ್ಲದೆ, ವಿಧಾನ ಸಭೆ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಆಡಳಿತಾರೂಢ ಪಕ್ಷದಿಂದಾದ ಸಾಧನೆಗಳನ್ನು ಯಾವುದೇ ರೀತಿಯಲ್ಲೂ ಬಿಂಬಿಸದಿರುವಂತೆಯೂ ಆಯೋಗವು ಸರ್ಕಾರಕ್ಕೆ ಸೂಚಿಸಿದೆ.

Election Commission Bars Schemes For Poll-Bound States In Union Budget

ಫೆಬ್ರವರಿ 4ರಿಂದ ಮಾರ್ಚ್ 8ರ ಅವಧಿಯಲ್ಲಿ ಪಂಜಾಬ್, ಗೋವಾ, ಉತ್ತರಾಖಾಂಡ್, ಉತ್ತರ ಪ್ರದೇಶ ಹಾಗೂ ಮಣಿಪುರ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಯಲಿದೆ.

ಈ ಹಿನ್ನೆಲೆಯಲ್ಲಿ, ಫೆ. 1ರಂದು ಮಂಡನೆಯಾಗುವ ಕೇಂದ್ರ ಬಜೆಟ್ ಆಯಾ ರಾಜ್ಯಗಳ ಮತದಾರರ ಮೇಲೆ ಪರಿಣಾಮ ಬೀರಿ ಅದು ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಗೆ ಹೆಚ್ಚು ವರದಾನವಾಗಬಹುದೆಂದು ವಿಪಕ್ಷಗಳು ಚುನಾವಣಾ ಆಯೋಗದ ಮೊರೆ ಹೋಗಿದ್ದವು.

ಏತನ್ಮಧ್ಯೆ, ಇದೇ ಕಾರಣವನ್ನು ಮುಂದಿಟ್ಟುಕೊಂಡು ಕೇಂದ್ರ ಬಜೆಟ್ ಅನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ್ದ ಸರ್ವೋಚ್ಛ ನ್ಯಾಯಾಲಯ ಅರ್ಜಿಯನ್ನು ತಿರಸ್ಕೃತಗೊಳಿಸಿತ್ತು.

ಇದನ್ನು ಗಮನದಲ್ಲಿಟ್ಟುಕೊಂಡು ವಿಪಕ್ಷಗಳ ಮನವಿಗೆ ಸ್ಪಂದಿಸಿರುವ ಚುನಾವಣಾ ಆಯೋಗ, ಕೇಂದ್ರ ಸರ್ಕಾರಕ್ಕೆ ಐದು ರಾಜ್ಯಗಳಿಗೆ ಯಾವುದೇ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸಕೂಡದೆಂದು ತಿಳಿಸಿದೆ.

English summary
The Election Commission has strictly instructed the central government, not to announce any sc No specific schemes for states in the union budget where assembly elections are due this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X