ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿ ಚಿದಂಬರಂ ಪುತ್ರ ಕಾರ್ತಿ ಕಚೇರಿ ಮೇಲೆ 'ಇಡಿ' ದಾಳಿ

By Mahesh
|
Google Oneindia Kannada News

ಬೆಂಗಳೂರು, ಡಿ.01: ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಅವರ ಮನೆ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಹಠಾತ್ ದಾಳಿ ನಡೆಸಿದ್ದಾರೆ.

ಏರ್ ಸೆಲ್ ಹಾಗೂ ಮ್ಯಾಕ್ಸಿಸ್ ನಡುವಿನ ಪರಭಾರೆ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಅಡ್ವಾನ್ಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಸಂಸ್ಥೆಯ ಇಬ್ಬರು ನಿರ್ದೇಶಕರನ್ನು ಕಳೆದ ಆಗಸ್ಟ್ ನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. [ಮಾರನ್ ಪರಮಾಪ್ತರಿಗೆ ಸಿಬಿಐ ಹೊಡೆತ]

Enforcement Directorate raids Karthi Chidambaram linked firms

ಪಿ ಚಿದಂಬರಂ ಅವರು 2006ರಲ್ಲಿ ವಿತ್ತ ಸಚಿವರಾಗಿದ್ದಾಗ ಏರ್ ಸೆಲ್ ನಲ್ಲಿ ಮ್ಯಾಕ್ಸಿಸ್ ಬಂಡವಾಳ ಹೂಡಿಕೆಗೆ ಅನುಮತಿ ನೀಡಿದ್ದರು. 2004 ಹಾಗೂ 2007ರಲ್ಲಿ ಕೇಂದ್ರ ಟೆಲಿಕಾಂ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ಏರ್ ಸೆಲ್ ಗೆ ತರಂಗ ಗುಚ್ಛ ಗುತ್ತಿಗೆ ಸಿಗುವಂತೆ ಮಾಡಿದ್ದರು. ಇದಕ್ಕೆ ಬದಲಾಗಿ ಮಲೇಷಿಯಾ ಮೂಲದ ಮ್ಯಾಕ್ಸಿಸ್ ಕಮ್ಯೂನಿಕೇಷನ್ ಸಂಸ್ಥೆ ಸನ್ ನೆಟ್ವರ್ಕ್ ಮಾರಲು ಮಾರನ್ ಮುಂದಾಗಿದ್ದರು.

ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರು ಹೊತ್ತಿದ್ದರು.

ಇದರ ಜೊತೆಗೆ ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ. ಏರ್ ಸೆಲ್ ಮ್ಯಾಕ್ಸಿಸ್ ಒಪ್ಪಂದದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ದಯಾನಿಧಿ ಮಾರನ್ ಅವರ 742 ಕೋಟಿ ರು ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಂಡಿದ್ದರು.

English summary
The Enforcement Directorate officials on Tuesday conducted raids on firms allegedly linked to Karthi Chidambaram, the son of former union minister, P Chidambaram.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X