ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರುಣಾಚಲ ಪ್ರದೇಶದ ಮಾಜಿ ಸಿಎಂ ಆತ್ಮಹತ್ಯೆಗೆ ಶರಣು

|
Google Oneindia Kannada News

ಬೆಂಗಳೂರು, ಆಗಸ್ಟ್ 09 : ಅರುಣಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ಕಲಿಖೋ ಪೌಲ್ (47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಖಿನ್ನತೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Former Arunachal Pradesh CM Kalikho Pul found dead

ಮಂಗಳವಾರ ಬೆಳಗ್ಗೆ ಕಲಿಖೋ ಪೌಲ್ ಅವರ ನಿವಾಸದಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪೌಲ್ 2016ರ ಫೆಬ್ರವರಿಯಿಂದ ಜುಲೈ ತನಕ ಅರುಣಾಚಲಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಸುಪ್ರೀಂಕೋರ್ಟ್ ಆದೇಶದ ಬಳಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.[ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿ ಪೆಮಾ ಖಂಡು]

ಅರುಣಾಚಲಪ್ರದೇಶದ ಕಾಂಗ್ರೆಸ್ ಸರ್ಕಾರದೊಳಗೆ ಭಿನ್ನಮತ ಉಂಟಾಗಿತ್ತು. ಆಗ ಬಂಡಾಯ ಶಾಸಕರ ಬೆಂಬಲ ಪಡೆದು ಕಲಿಖೋ ಪೌಲ್ ಮುಖ್ಯಮಂತ್ರಿಯಾಗಿದ್ದರು. ಆದರೆ, ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲಾಗಿತ್ತು.

ಕಾಂಗ್ರೆಸ್ ಈ ಕ್ರಮವನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ಅರುಣಾಚಲ ಪ್ರದೇಶದಲ್ಲಿ ರಚನೆಯಾದ ಸರ್ಕಾರ ಅಸಂವಿಧಾನಿಕ ಎಂದು ತೀರ್ಪು ನೀಡಿತ್ತು. ಕೂಡಲೇ ಕಲಿಕೋ ಪೌಲ್ ರಾಜೀನಾಮೆ ನೀಡಬೇಕು ಎಂದು ಸೂಚಿಸಿತ್ತು. ಬಂಡಾಯ ಶಾಸಕರು ತಮ್ಮ ಬೆಂಬಲ ವಾಪಸ್ ಪಡೆದಿದ್ದರು. ಆಗ ಪೌಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಂತರ ನಡೆದ ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಪೆಮಾ ಖಂಡು ಅವರನ್ನು ಅವಿರೋಧವಾಗಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು. ಜುಲೈ 18ರಂದು ಪೆಮಾ ಖಂಡು ಅವರು ಮುಖ್ಯಮಂತ್ರಿಯಾಗಿ, ಚೌನಾ ಮೇನ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

English summary
Former Arunachal Pradesh chief minister and Congress rebel Kalikho Pul (47) was found dead at his residence on Tuesday, August 9, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X