ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಎಲ್ಲೆಂದರಲ್ಲಿ ಇನ್ಮುಂದೆ ಮದ್ಯ ಸೇವಿಸಬೇಡಿ ಹುಷಾರ್!

ಗೋವಾದಲ್ಲಿ ಇನ್ಮುಂದೆ ರಸ್ತೆ ಬದಿಯಲ್ಲಿ ಕುಳಿತು ಬಿಯರ್ ಕುಡಿದರೆ ನೇರ ಜೈಲಿಗೆ ಸೇರಬೇಕಾಗುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರಿಗೆ ಜೈಲು ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ.

By Mahesh
|
Google Oneindia Kannada News

ಪಣಜಿ, ಮೇ 4 : ಗೋವಾದಲ್ಲಿ ಇನ್ಮುಂದೆ ರಸ್ತೆ ಬದಿಯಲ್ಲಿ ಕುಳಿತು ಬಿಯರ್ ಕುಡಿದರೆ ನೇರ ಜೈಲಿಗೆ ಸೇರಬೇಕಾಗುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರಿಗೆ ಜೈಲು ಶಿಕ್ಷೆ ವಿಧಿಸಲು ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವುದು ಕಂಡು ಬಂದಲ್ಲಿ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ. ಐಪಿಸಿ ಸೆಕ್ಷನ್ 34ರ ಅನ್ವಯ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಎಸ್ಪಿ (ಉತ್ತರ ಗೋವಾ) ಕಾರ್ತಿಕ್ ಕಶ್ಯಪ್ ಹೇಳಿದ್ದಾರೆ

Go to jail if you booze in the open in Goa

ಕಾಲುನ್ ಗೇಟ್ ಪೊಲೀಸ್ ಠಾಣೆಯಲ್ಲಿ ನಡೆದ ಸಾರ್ವಜನಿಕರ, ಪ್ರವಾಸೋದ್ಯಮ ಪ್ರತಿನಿಧಿಗಳ ಹಾಗೂ ಪೊಲೀಸರ ಸಭೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಕೂಡ ಪೊಲೀಸರಿಗೆ ಅಗತ್ಯ ಮಾಹಿತಿ ನೀಡಿದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸಿ ಇತರರಿಗೆ ತೊಂದರೆಯುಂಟು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಪೊಲೀಸ್ ಇಲಾಖೆ ಹೇಳಿದೆ.

ರಾತ್ರಿ ಹೊತ್ತು ಪ್ರವಾಸಿಗರು ಬೀಚ್ ಗಳಲ್ಲಿ ಕುಳಿತುಕೊಂಡು ಮದ್ಯ ಸೇವಿಸುತ್ತಿರುವುದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.(ಪಿಟಿಐ)

English summary
Consuming alcohol in public places in Goa can now land you in jail. Police in the tourist state have asked its personnel to arrest people who are found drinking in public places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X