ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಲ್ಲಿ ಶಂಕಿತ ಐಎಸ್‌ಐಎಸ್ ಉಗ್ರನ ವಿಚಾರಣೆ

By ವಿಕಾಸ್ ನಂಜಪ್ಪ
|
Google Oneindia Kannada News

ಪಣಜಿ, ಫೆಬ್ರವರಿ 03 : ಗೋವಾದಲ್ಲಿ ಐಎಸ್‌ಐಎಸ್ ಸಂಘಟನೆಗೆ ಬೆಂಬಲ ನೀಡುತ್ತಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ವಿಚಾರಣೆ ನಡೆಸಲಾಗುತ್ತಿದೆ. ಗೋವಾಕ್ಕೆ ಆಗಮಿಸುವ ವಿದೇಶಿ ಪ್ರಜೆಗಳ ಮೇಲೆ ಉಗ್ರರು ದಾಳಿ ನಡೆಸಬಹುದು ಎಂದು ಎನ್‌ಐಎಗೆ ಮಾಹಿತಿ ಲಭ್ಯವಾಗಿತ್ತು

ಗೋವಾದ ಭಯೋತ್ಪಾದಕ ನಿಗ್ರಹ ದಳ ಮತ್ತು ಕೇಂದ್ರ ಗುಪ್ತಚರ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿವೆ. ಬಂಧಿತ ವ್ಯಕ್ತಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿನ ಕಾರುಗಳ್ಳರ ಜೊತೆ ಸಂಪರ್ಕ ಹೊಂದಿದ್ದ ಎಂದು ತಿಳಿದುಬಂದಿದೆ. [ಉಗ್ರರಿಗೆ ಮುಂಬೈನಿಂದ ಸೂಚನೆ ಸಿಗುತ್ತಿತ್ತು]

isis

ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರೀಯ ತನಿಖಾ ದಳ ಬೆಂಗಳೂರು, ಮುಂಬೈ, ಮಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಿ ಹಲವು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಸಿರಿಯ (ಐಎಸ್‌ಐಎಸ್) ಶಂಕಿತ ಉಗ್ರರನ್ನು ಬಂಧಿಸಿತ್ತು. [ಉಗ್ರರ ಬಳಿ ಸುಧಾರಿತ ಸ್ಫೋಟಕ ಪತ್ತೆ]

ಈ ಉಗ್ರರ ವಿಚಾರಣೆ ವೇಳೆ ಗೋವಾದಲ್ಲಿ ಫ್ರಾನ್ಸ್ ಮತ್ತು ಇತರ ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಯಬಹುದು ಎಂಬ ಮಾಹಿತಿ ಲಭ್ಯವಾಗಿತ್ತು. ಸೇನೆಯ ಕಾರನ್ನು ಅಪಹರಣ ಮಾಡಿ ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಲಾಗಿದೆ ಎಂದು ತಿಳಿದುಬಂದಿತ್ತು. ['ನಮಗೆ ಭಾರತದ ಸಂವಿಧಾನದ ಮೇಲೆ ಗೌರವವಿಲ್ಲ']

ಈ ಮಾಹಿತಿಯ ಅನ್ವಯ ದಾಳಿ ನಡೆಸಿದ ಗೋವಾ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳ ತಂಡ ಶಂಕಿತ ಉಗ್ರನನ್ನು ವಶಕ್ಕೆ ಪಡೆದಿವೆ. ಬಂಧಿತ ಯುವಕ ಕಾರನ್ನು ಅಪಹರಣ ಮಾಡಿ ಮಹಾರಾಷ್ಟ್ರ ಮತ್ತು ಗೋವಾದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ತಿಳಿದುಬಂದಿದ್ದು, ವಿಚಾರಣೆ ಮುಂದುವರೆದಿದೆ.

ವಶಕ್ಕೆ ಪಡೆದಿರುವ ಯುವಕ ಮಹಾರಾಷ್ಟ್ರ ಮತ್ತು ಗೋವಾದಲ್ಲಿನ ಕಾರುಗಳ್ಳರ ಜೊತೆ ಸಂಪರ್ಕದಲ್ಲಿದ್ದ. ಕಾರುಗಳ್ಳರ ಸಹಾಯದಿಂದ ಸೇನೆಯ ಕಾರನ್ನು ಅಪಹರಣ ಮಾಡಿ, ದಾಳಿ ನಡೆಸಲು ಮುಂದಾಗಿದ್ದ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯುವಕನಿಗೆ ಗೋವಾದಲ್ಲಿ ಬಾಡಿಗೆ ಮನೆ ಪಡೆಯಲು 1.5 ಲಕ್ಷ ರೂ.ಗಳನ್ನು ನೀಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

English summary
The Goa Anti Terrorist Squad and the Intelligence Bureau are jointly questioning a man alleged to be a sympathiser of the ISIS. This person was picked up by the Goa ATS after it had been found that he was allegedly linked to the ISIS.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X