ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಕಚೇರಿಗಳ ಸುಧಾರಣೆಗೆ ಸಿಎಂ ಯೋಗಿ ಮತ್ತೊಂದು ಹೆಜ್ಜೆ

ಸರ್ಕಾರಿ ಕಚೇರಿಗಳ ಸುಧಾರಣೆಗೆ ತರುವ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರ ಕಡ್ಡಾಯಗೊಳಿಸುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆಧಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

|
Google Oneindia Kannada News

ಲಕ್ನೋ, ಏಪ್ರಿಲ್ 23 : ಮಹಾಪುರುಷರ ಜಯಂತಿಗಳಿಗೆ ರಜೆ ಇಲ್ಲ ಎಂದು ಹೇಳಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇದೀಗ ಸರ್ಕಾರ ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವಂತೆ ಆದೇಶಿಸಿದ್ದಾರೆ.

ಶನಿವಾರ ರಾತ್ರಿ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಯೋಗಿ, ಆಫೀಸ್‍ ನಿಂದ ಆರಂಭವಾಗಿ ಬ್ಲಾಕ್ ಹಂತದ ಆಫೀಸ್ ವರೆಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. [ಮಹಾಪುರುಷರ ಜಯಂತಿಗೆ ಶಾಲೆಗಿಲ್ಲ ರಜಾ: ಯೋಗಿ ಆದಿತ್ಯನಾಥ್]

Install biometric attendance system in all offices upto Block level:Yogi Adityanath

ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಹೊರತಾಗಿ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಪ್ರಸ್ತುತ ಆಯ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸದ ಮಾಹಿತಿ ಮತ್ತು ಗ್ರಾಮದ ಪಂಚಾಯತ್ ನ ಪ್ರಧಾನ್ ಸಂಪರ್ಕ ವಿಳಾಸವನ್ನು ಬೋರ್ಡ್ ಮೂಲಕ ಪ್ರಕಟಿಸಬೇಕೆಂದು ಸೂಚಿಸಿದ್ದಾರೆ.

ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಅವಾಸ್ ಯೋಜನದ ಗುರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೆಲಸಗಾರರ ಹೆಸರುಗಳು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಸೇರ್ಪಡೆಯಾಗಬೇಕು ಎಂದು ಯೋಗಿ ಹೇಳಿದ್ದಾರೆ.

English summary
To ensure all government employees reach work on time, Uttar Pradesh chief minister Yogi Adityanath has instructed that a biometric attendance system be put in place in offices upto the block level.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X