ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯೋಗ ಗುರುವಾಗಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

|
Google Oneindia Kannada News

ನವದೆಹಲಿ, ಜೂ. 03: ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ವಿಶ್ವ ಯೋಗ ದಿನಕ್ಕೆ ಜಾಗತಿಕ ಮನ್ನಣೆ ದೊರೆತಿದ್ದು ಗೊತ್ತೆಇದೆ. ಜೂನ್ 21 ರಂದು ಆಚರಿಸಲಾಗುತ್ತಿರುವ ಮೊದಲ ವಿಶ್ವ ಯೋಗದಿನವನ್ನು ಐತಿಹಾಸಿಕವಾಗಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸೇರಿದಂತೆ ಅನೇಕ ಗಣ್ಯರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಮಂತ್ರಣ ನೀಡಲಾಗಿದೆ.['ಮೋದಿ ಯೋಗ ದಿನಕ್ಕೆ ಅಂತಾರಾಷ್ಟ್ರೀಯ ಮಾನ್ಯತೆ']

modi

ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸಂಸ್ಕೃತಿ ಸಚಿವ ಶ್ರೀಪಾದ ನಾಯಕ್‌, ದೆಹಲಿಯ ರಾಜ್‌ಪತ್‌ನಲ್ಲಿ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮಕ್ಕಳು ,ಸೈನಿಕರು, ನಾಗರಿಕರು ಹಾಗೂ ಪೊಲೀಸರು ಸೇರಿದಂತೆ 1 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಜೂನ್ 21 ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್‌ ಸಿಂಗ್‌ ಕೂಡಾ ಯೋಗ ಮಾಡಲಿದ್ದು ಸಚಿವ ಸಂಪುಟದ ಬಹುತೇಕರು ಭಾಗವಹಿಸಲಿದ್ದಾರೆ.[ಯೋಗಕ್ಕೆ ಮೋದಿ ಮಣೆ : ಸಿಕ್ಕಿತು ಜಾಗತಿಕ ಮನ್ನಣೆ]

ಯೋಗಕ್ಕೆ ಜಾಗತಿಕ ಮನ್ನಣೆ ದೊರಕಿಸಿಕೊಟ್ಟ ಮೋದಿ
2014ರ ಸೆ.27ರಂದು ಯುನೆಸ್ಕೋ ಸಭೆ ಉದ್ದೇಶಿಸಿ ಮಾತನಾಡಿದ್ದ ಮೋದಿ, ಜೂನ್‌ 21 ಅನ್ನು ವಿಶ್ವ ಅಂತಾರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಬೇಕು ಎಂದು ಒತ್ತಾಯ ಮಾಡಿದ್ದರು. ಪ್ರಧಾನಿ ಪ್ರಸ್ತಾಪಕ್ಕೆ ವಿಶ್ವಸಂಸ್ಥೆಯ 177 ಸದಸ್ಯ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿದ್ದವು. ನಂತರ 2014ರ ಡಿ.11ರಂದು, ಜೂನ್‌ 21 ನ್ನು ಯೋಗ ದಿನ ಎಂದು ಘೋಷಣೆ ಮಾಡಲಾಗಿತ್ತು.

ಚೀನಾ, ಜಪಾನ್‌, ಇಂಡೋನೇಷಿಯಾ, ದಕ್ಷಿಣ ಕೊರಿಯ, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಭೂತಾನ್‌ , ಲ್ಯಾಟಿನ್‌ ಅಮೆರಿಕ, ಬ್ರೆಜಿಲ್‌, ಅರ್ಜೆಂಟಿನಾ ಮತ್ತಿತರ ರಾಷ್ಟ್ರಗಳು ಪ್ರಸ್ತಾವನೆಗೆ ಸಹಮತ ವ್ಯಕ್ತಪಡಿಸಿದ್ದವು.

English summary
This June 21, a 35-minute mass demonstration of 15 yoga asanas by 45,000 school children, government officials, diplomats, army personnel and NCC cadets, led by PM Narendra Modi himself, at Rajpath will possibly lead to a record of sorts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X