ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಯಲಲಿತಾ ಅಕ್ರಮ ಆಸ್ತಿ ಕೇಸ್ : ಕರ್ನಾಟಕದ ವಾದವೇನು?

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಜನವರಿ 20 : ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆ ಫೆ.2ರಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ವಾದ ಮಂಡನೆ ಮಾಡಲು ಅವಕಾಶ ನೀಡಲಿಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಲಿದೆ.

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಆರೋಪ ಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಫೆ.2ರಿಂದ ದಿನ ಬಿಟ್ಟು ದಿನ ಈ ಅರ್ಜಿಯ ವಿಚಾರಣೆ ನಡೆಯಲಿದೆ. [ಫೆ.2ರಿಂದ ಜಯಲಲಿತಾ ಅರ್ಜಿ ವಿಚಾರಣೆ]

jayalalithaa

ಸರ್ಕಾರದ ಪರವಾಗಿ ವಾದ ಮಂಡನೆ ಮಾಡುವ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು, ಕರ್ನಾಟಕ ಹೈಕೋರ್ಟ್‌ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಲಿಖಿತ ಮನವಿ ಸಲ್ಲಿಸಲು ಮಾತ್ರ ಅವಕಾಶ ನೀಡಿತ್ತು. ವಾದ ಮಂಡನೆಗೆ ಅವಕಾಶ ನೀಡಲಿಲ್ಲ ಎಂದು ಕೋರ್ಟ್‌ ಮುಂದೆ ವಾದ ಮಂಡನೆ ಮಾಡಲಿದ್ದಾರೆ. [ಜಯಾ ಪ್ರಕರಣದ timeline]

ಪ್ರಕರಣದಲ್ಲಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತ ಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಬೇಕು ಎಂದು ಸರ್ಕಾರ ಮನವಿ ಮಾಡಲಿದೆ. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]

ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡದ ತೀರ್ಪಿನ ಜಾರಿಗೆ ಮನವಿ ಮಾಡಲಾಗುತ್ತದೆ. ಡಿಎಂಕೆ ನಾಯಕ ಅನ್ಬಳಗನ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳ ವಿಚಾರಣೆ ಒಟ್ಟಿಗೆ ನಡೆಯಲಿದೆ.

ಹೈಕೋರ್ಟ್ ಆದೇಶವೇನು? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ನೀಡಿದ್ದರು. ನಂತರ ಜಯಲಲಿತಾ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು.

English summary
The Karnataka Government would open its arguments in the appeal filed against the acquittal of Tamil Nadu Chief Minister, J.Jayalalithaa by pointing out that it was allowed only a written submission. Government has filed an appeal against the acquittal of Jayalalithaa by the Karnataka High Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X