ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭ್ರಷ್ಟಚಾರ ಪ್ರಕರಣದ ವಿಚಾರಣೆಗೆ ಸುಪ್ರೀಂನಲ್ಲಿ ವಿಶೇಷ ಪೀಠ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಡಿಸೆಂಬರ್ 01 : ಭ್ರಷ್ಟಾಚಾರ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಪೀಠ ರಚನೆಯಾಗಲಿದೆ. ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ವಹಿಸಿಕೊಳ್ಳಲಿರುವ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರು ವಿಶೇಷ ಪೀಠ ರಚನೆ ಮಾಡಲು ಮುಂದಾಗಿದ್ದಾರೆ.

ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ಪಾರದರ್ಶಕವಾಗಿ, ತ್ವರಿತವಾಗಿ ನಡೆಯಬೇಕು ಎಂಬುದು ನ್ಯಾ.ಟಿ.ಎಸ್.ಠಾಕೂರ್ ಅವರ ಅಭಿಪ್ರಾಯವಾಗಿದೆ. ಆದ್ದರಿಂದ, ಅವರು ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಪೀಠವನ್ನು ರಚನೆ ಮಾಡಲು ನಿರ್ಧರಿಸಿದ್ದಾರೆ. [ಠಾಕೂರ್ ಮುಂದಿನ ಸಿಜೆಐ]

supreme court

ಜಯಲಲಿತಾ ಅರ್ಜಿ ವಿಚಾರಣೆಗೆ ಪೀಠ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ 2016ರ ಫೆಬ್ರವರಿ 2ರಿಂದ ನಡೆಯಲಿದೆ. [ಫೆಬ್ರವರಿ ತನಕ ಜಯಲಲಿತಾ ನಿರಾಳ]

ಯಾವ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ ಎಂಬುದು ಜನವರಿಯಲ್ಲಿ ತಿಳಿಯಲಿದೆ. ಇಬ್ಬರು ಅಥವ ಮೂವರು ನ್ಯಾಯಮೂರ್ತಿಗಳ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಲಿದೆ. ಫೆಬ್ರವರಿ 2ರಿಂದ ದಿನ ಬಿಟ್ಟು ದಿನ ಸುಪ್ರೀಂಕೋರ್ಟ್ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. [ಜಯಾ ಪ್ರಕರಣದ timeline]

2 ತಿಂಗಳ ಸಮಯಬೇಕು : ಜಯಲಲಿತಾ ಅವರ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ಬೇಕು ಎಂದು ಅಂದಾಜಿಸಲಾಗಿದೆ. ಡಿಎಂಕೆ ನಾಯಕ ಅನ್ಬಳಗನ್ ಅವರು ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯನ್ನು ಕರ್ನಾಟಕ ಸರ್ಕಾರದ ಅರ್ಜಿಯ ಜೊತೆ ನಡೆಸಲಾಗುತ್ತದೆ.

English summary
The Supreme Court is likely to have dedicated benches to hear cases on corruption. Justice T.S.Thakur who will take over as the Chief Justice of India has indicated that there would be zero tolerance in corruption cases and would also want such matters disposed off at the earliest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X