ಬಿಎಸ್ವೈ ಹಿಂದೆ ದುಂಬಾಲು ಬಿದ್ದ ಮಹಾರಾಷ್ಟ್ರ ಬಿಜೆಪಿ ಅಭ್ಯರ್ಥಿಗಳು
ಬೆಂಗಳೂರು, ಅ 13: ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಪ್ರಚಾರಕ್ಕೆ ತೆರಳಲಿದ್ದಾರೆ.
ಕಳೆದ ಮಹಾ ಅಸೆಂಬ್ಲಿ ಚುನಾವಣೆಯಲ್ಲೂ ಯಡಿಯೂರಪ್ಪ ಸುಮಾರು 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದರು. ಅದು, ಪಕ್ಷಕ್ಕೆ ಭರ್ಜರಿ ವರ್ಕೌಟ್ ಆಗಿತ್ತು.
ಲಿಂಗಾಯತ ಮತಬ್ಯಾಂಕ್ ಹೆಚ್ಚಾಗಿರುವ ಸುಮಾರು ನಲವತ್ತಕ್ಕೂ ಕ್ಷೇತ್ರಗಳು ಮಹಾರಾಷ್ಟ್ರದಲ್ಲಿದೆ. ಅಲ್ಲೆಲ್ಲಾ, ಪ್ರಚಾರಕ್ಕೆ ಬರಬೇಕೆಂದು, ಪಕ್ಷದ ಅಭ್ಯರ್ಥಿಗಳು, ಯಡಿಯೂರಪ್ಪನವರಿಗೆ ತೀವ್ರ ಒತ್ತಡ ಹಾಕುತ್ತಿದ್ದಾರೆಂದು ವರದಿಯಾಗಿದೆ.

ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಯಡಿಯೂರಪ್ಪ, ಅಕ್ಟೋಬರ್ ಹದಿನೈದರಿಂದ ಮೂರು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಳ್ಳಲಿದ್ದಾರೆ. ಕಲಬುರಗಿಯಿಂದ ರಸ್ತೆಯ ಮೂಲಕ, ಮಹಾರಾಷ್ಟ್ರಕ್ಕೆ ಯಡಿಯೂರಪ್ಪ ತಲುಪಲಿದ್ದಾರೆ.
ಕೊಲ್ಹಾಪುರ, ಸೊಲ್ಹಾಪುರ, ಪುಣೆ, ನಾಂದೇಡ್ ಜಿಲ್ಲೆಗಳಲ್ಲಿ ಲಿಂಗಾಯತ ವೋಟ್ ಬ್ಯಾಂಕ್ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ, ಮತ್ತು, ಕನ್ನಡಿಗರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಅಕ್ಟೋಬರ್ ಹದಿನೇಳರಿಂದ ಯಡಿಯೂರಪ್ಪ, ಮಹಾರಾಷ್ಟ್ರದಲ್ಲಿ ಪ್ರಚಾರಕ್ಕೆ ತೆರಳಲು ನಿರ್ಧರಿಸಿದ್ದರು. ಆದರೆ, ಆ ವೇಳೆ, ಮೋದಿ ಮತ್ತು ಶಾ ಅವರ ಸಾರ್ವಜನಿಕ ಸಭೆ ಆಯೋಜನೆಗೊಂಡಿರುವುದರಿಂದ, ಎರಡು ದಿನಗಳ ಮೊದಲೇ, ಬಿಎಸ್ವೈ, ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications